ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ, ಸಂಸದರು, ಶಾಸಕರು, ಅಧಿಕಾರಿಗಳು ಇನ್ನಿತರರು ಭಾಗವಹಿಸಿದ್ದರು.
“ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ನೀಲನಕ್ಷೆ -ಸಿಎಂ “
ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದ ರಾವ್ ಅವರ ಸಮಿತಿ ರಚಿಸಿದ್ದೇವೆ ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಿನ್ನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಏರ್ಪಡಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ತುಂಗಭದ್ರ ಅಣೆಕಟ್ಟಿನ ಕ್ಲಸ್ಟರ್ ಗೇಟ್ ಅಳವಡಿಸಿದ ಇಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.
ವರದಿ :ಬಸವರಾಜ ಕೆ ಕಳಸಪ್ಪನವರ