ಶಿವಮೊಗ್ಗ :ಇಂದು ದಿವಂಗತ ಚಂದ್ರಶೇಖರನ್.ಪಿ. ಅವರ ಮಕ್ಕಳ ಭವಿಷ್ಯವನ್ನು ಹಾಗೂ ಕುಟುಂಬಕ್ಕೆ ಶಕ್ತಿ ತುಂಬುವ ಕೆಲಸದಲ್ಲಿ ನಮ್ಮೆಲ್ಲರ ಸಾರ್ಥಕದ ಕ್ಷಣ ವಾಗಿದ್ದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕಚೇರಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ದಿವಂಗತ ಚಂದ್ರಶೇಖರನ್ ಪಿ ಇವರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕುಟುಂಬಕ್ಕೆ ಸಹಾಯವಾಗುವ ನಿಟ್ಟಿನಲ್ಲಿ ಅವರ ಕುಟುಂಬಕ್ಕೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ರೂ. 25 ಲಕ್ಷಗಳ ಪರಿಹಾರಧನದ ಚೆಕ್ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬುವಂತ ಕೆಲಸವನ್ನು ಮಾಡಲಾಯಿತು.
ನಮ್ಮ ಮನವಿಯನ್ನು ಪುರಸ್ಕರಿಸಿದ ರಾಜ್ಯಸರ್ಕಾರಕ್ಕೆ ವೈಯಕ್ತಿಕವಾಗಿ ಹಾಗೂ ಶಿವಮೊಗ್ಗ ನಗರದ ಸಮಸ್ತ ನಾಗರೀಕರಪರವಾಗಿ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಚ್. ಎನ್. ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.