ಚಿತ್ತಾಪುರ: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ದಿಗ್ಗಾಂವ ಗ್ರಾಮದ ಹಳ್ಳದ ನೀರು 110 ರಿಂದ 120 ಮನೆಯೊಳಗೆ ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ನಂತರ ಮಾತನಾಡಿದ ಅವರು, ಮನೆಗಳಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಆಹಾರ ಸಾಮಾಗ್ರಿಗಳು ಹಾಳಾಗಿದ್ದು, ಸರ್ಕಾರದ ವತಿಯಿಂದ ಸಿಗಬೇಕಾದ ಪರಿಹಾರ ಒದಗಿಸಿ ಕೊಡಲಾಗುವುದು. ದಿಗ್ಗಾಂವ ಗ್ರಾಮದಲ್ಲಿ ರಾತ್ರಿ ಸುರಿದ ಮಳೆ ರೀಕಾರ್ಡ್ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ಮುಹಮ್ಮದ್ ಸುಭಾನ ಗ್ರಾಮ ಆಡಳಿತ ಅಧಿಕಾರಿ ದಿಗ್ಗಾವ್ ಮಾರುತಿ ಎನ್ ಗ್ರಾಪಂ ಅಧ್ಯಕ್ಷ ಹರಳಯ್ಯ ಬಡಿಗೇರ್, ಸಿದ್ದಣ್ಣಗೌಡ ಆರ್.ಡಿ, ಶ್ರೀಮಂತ ಗುತ್ತೇದಾರ, ಶರಣು ಸೇರಿದಂತೆ ಇತರರು ಇದ್ದರು
ವರದಿ ಮೊಹಮ್ಮದ್ ಅಲಿ ಚಿತ್ತಾಪುರ