ಕಲಬುರಗಿ/ಚಿತ್ತಾಪುರ :2024- 2025 ಸಾಲಿನಲ್ಲಿ ಚಿತ್ತಾಪುರ ಕಾಳಗಿ ಮತ್ತು ಶಹಬಾದ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ 2014ರ ಅನ್ವಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದ್ದು, ಸೆ.31ರೊಳಗೆ ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವ್ ಕುಮಾರ ಮಾನಕರ್ ತಿಳಿಸಿದ್ದಾರೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಾಗಿದ್ದು ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥಿನ್ ಹೊದಿಕೆ, ಪಂಪ್ ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ. ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾಗಿರುವ ರೈತರ ಅರ್ಜಿ ಪರಿಗಣಿಸುವುದಿಲ್ಲ. ಆಸಕ್ತರು ನಿಗದಿಪಡಿಸಿದ ನಮೂನೆಯಲ್ಲಿ ಸೆ.31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಪ್ರಮಾಣದ ಅರ್ಜಿ ಸಲ್ಲಿಕೆಯಾದಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ವರದಿ ಮೊಹಮ್ಮದ್ ಅಲಿ ಚಿತ್ತಾಪುರ