ಬೆಂಗಳೂರು : ಕೇಂದ್ರ ಸಚಿವರಾದ ಶ್ರೀ ಜಿತಿನ್ ರಾಮ್ ಮಂಜಿ ಮತ್ತು ಶ್ರೀ ಸಂತೋಷ್ ಕುಮಾರ್ ಸುಮನ್ ನೇತ್ರುತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯಾತೀತ) ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಡಾ.ಮಾಯಾ ಪ್ರದೀಪ್ ಮತ್ತು ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಆದಿದೇವ್ ಆಯ್ಕೆಯಾಗಿದ್ದಾರೆ. ಶ್ರೀಮತಿ ಮಾಯಾ ಪ್ರದೀಪ್ ರವರು ಹೆಸರಾಂತ ಸಾಮಾಜಿಕ ಕಾರ್ಯಕರ್ತರಾಗಿದ್ದು, ಹಲವಾರು ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ ಮತ್ತು ಮಹಿಳಾ ಮತ್ತು ಯುವಕರ ಸಬಲೀಕರಣಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಪಕ್ಷದ ರಾಷ್ಟ್ರೀಯ ಮುಖ್ಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಪಾಂಡೆ ಮತ್ತು ರಾಷ್ಟ್ರೀಯ ಯುವ ಘಟಕದ ಪ್ರದಾನ ಕಾರ್ಯದರ್ಶಿ ವಿನೋದ್ ಕುಮಾರ್ ರವರ ಸಮ್ಮುಖದಲ್ಲಿ ಡಾ .ಮಾಯಾ ಪ್ರದೀಪ್ ಮತ್ತು ಆದಿ ದೇವ್ ರವರು ಅಧಿಕಾರವನ್ನು ಸ್ವೀಕರಿಸಿದರು.
ವರದಿ :ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ