ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮತ್ತಿಮಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳ ಕೊರತೆ ನೀಗಿಸುವಂತೆ ಚಿತ್ತಾಪೂರ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುಂಡು ಮತ್ತಿಮಡು ಅವರು ಆಗ್ರಹಿಸಿದ್ದಾರೆ.
1 ರಿಂದ 8 ನೇ ತರಗತಿವರೆಗೂ ಇರುವ ಸರಕಾರಿ ಶಾಲೆಯ ಪ್ರತಿ ತರಗತಿಯಲ್ಲಿ 30 ರಿಂದ 50 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, 1ರಿಂದ 8ನೇ ತರಗತಿಗೆ ಕೇವಲ ನಾಲ್ವರು ಶಿಕ್ಷಕರು ಮಾತ್ರ ಬೋಧಿಸುತ್ತಿದ್ದಾರೆ.ಅಂದಾಜು 150 ವಿದ್ಯಾರ್ಥಿಗಳಿಗೆ ಕೇವಲ ನಾಲ್ವರು ಶಿಕ್ಷಕರು ಇರುವುದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂತಹ ಶಾಲೆಗಳಿಗೆ ಭೇಟಿ ನೀಡಿ, ವಾಸ್ತವಾಂಶ ಅರಿತು ಕ್ರಮ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಶಾಲೆಯಲ್ಲಿ ಮುಖ್ಯ ಗುರುಗಳು ಇಲ್ಲದೇ ಇರುವುದರಿಂದ ಅಲ್ಲಿನ ಪ್ರಭಾರ ಮುಖ್ಯಗುರುಗಳಿಗೆ ತುಂಬಾ ತೊಂದರೆ ಆಗುತ್ತಿದ್ದು,ಕೂಡಲೇ ಈ ಸರಕಾರಿ ಶಾಲೆಗೆ ಮುಖ್ಯಗುರುಗಳನ್ನು ನೇಮಿಸಬೇಕು. ಶಾಲೆಯಲ್ಲಿ ಉದ್ಭವವಾಗಿರುವ ಮುಖ್ಯಗುರುಗಳ ಸಮಸ್ಯೆ ನೀಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದಲ್ಲಿ ಗ್ರಾಮಸ್ಥರಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.