ಬೆಂಗಳೂರು:ಗ್ರಾಮ ಪಂಚಾಯಿತಿಗಳು ಜನ ವಸತಿ ಸಭೆ ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಈ ಸಂದರ್ಭದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಯನ್ನು ರೂಪಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1999 ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯಿತಿಗಳು ಗ್ರಾಮ ಸಭೆಗಳನ್ನು ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ವರದಿ ಕೊಟ್ಟ ಕರಿಯಣ್ಣ