ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ: ಬಿ.ಹೆಚ್. ಕೃಷ್ಣಪ್ಪ

ಶಿವಮೊಗ್ಗ :ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಭವನ ಸಮಿತಿ, ಮುಖಾ-ಮುಖಿ ಎಸ್. ಟಿ ರಂಗತAಡ (ರಿ), ಇವರ ಸಂಯುಕ್ತ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಸರ್ಕಾರಿ ಬಾಲ ಮಂದಿರದಲ್ಲಿ 06 ರಿಂದ 16 ವರ್ಷದ ಮಕ್ಕಳಿಗೆ ಅ. 8 ರಿಂದ 20 ರ ವರೆಗೆ ರಂಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅತೀ ಸೂಕ್ಷ್ಮವಾಗಿ ಗಮನಿಸುತ್ತಾರೆ. ಅವರ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು, ವ್ಯಕ್ತಿತ್ವ ವಿಕಾಸನ ಶಿಬಿರ, ರಂಗ ಶಿಬಿರ ತರಬೇತಿಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತವೆ. ಪ್ರತಿಯೊಬ್ಬರು ಈ ಶಿಬಿರದ ಉಪಯೋಗ ಪಡೆದುಕೊಳ್ಳಿ ಎಂದರು.
ರಂಗಾಯಣದ ಆಡಳಿತ ಅಧಿಕಾರಿ ಡಾ. ಶೈಲಜಾ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಲ್ಲಿಯೇ ರಂಗ ಶಿಕ್ಷಣ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಬೇಕು. ಮಕ್ಕಳು ಮುಂದೆ ಈ ಕ್ಷೇತ್ರದಲ್ಲಿ ಉತ್ತಮವಾದ ಭವಿಷ್ಯವನ್ನು ಕಂಡುಕೊಳ್ಳಲು ಸಾಕಷ್ಟು ಅವಕಾಶಗಳಿದೆ ಎಂದ ಅವರು ರಂಗ ತರಬೇತಿ, ರಂಗಭೂಮಿಯ ಉದ್ದೇಶ, ಪ್ರಾಮುಖ್ಯತೆ ಹಾಗೂ ರಂಗಾಯಣ ಸಂಸ್ಥೆಯ ಕಾರ್ಯ ಚಟುವಟಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರಂಗಕರ್ಮಿ ಡಾ. ಸಾಸ್ವೇಹಳ್ಳಿ ಸತೀಶ್ ಅವರು ಮಕ್ಕಳಿಗೆ ರಂಗ ನಾಟಕ, ಜನಪದ ಗೀತೆ, ಭರತನಾಟ್ಯ, ನಮ್ಮ ಕಲೆ ಮತ್ತು ಸಂಸ್ಕೃತಿಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಮುಖಾ-ಮುಖಿ ಎಸ್.ಟಿ ರಂಗ ತಂಡದ ನಿರ್ದೇಶಕ ಮಂಜು ರಂಗಾಯಣ, ಶಿಬಿರ ನಿರ್ದೇಶಕ ಶಂಕರ್ ಕೆ., ಸರ್ಕಾರಿ ಬಾಲಕಿಯರ ಬಾಲ ಮಂದಿರ ಅಧೀಕ್ಷಕಿ ಜ್ಯೋತಿಕಲಾ, ಸರ್ಕಾರಿ ಬಾಲಕರ ಬಾಲ ಮಂದಿರ ಮತ್ತು ಬಾಲಕಿಯರ ಬಾಲ ಮಂದಿರದ ಮಕ್ಕಳು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ