ಕೊಪ್ಪಳ: ತಾಲೂಕಿನ ಹೊಸ ಗೊಂಡಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮಕ್ಕೆ ಶ್ರೀಮತಿ ಪಲ್ಲವಿ ಮಾಲಿ ಪಾಟೀಲ್ ರವರು ವೇದಿಕೆಗೆ ಗಣ್ಯರನ್ನು ಸ್ವಾಗತ ಕೋರಿದರು.
ಉದ್ಘಾಟನೆ ಕಾರ್ಯಕ್ರಮವನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಾಂತಮ್ಮ ಹೂಗಾರ್, ಶ್ರೀಮತಿ ಲತಾ ಹಳ್ಳಿಕೇರಿ,ಹಸಿರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು ಉದ್ಘಾಟನೆ ಸಂಚಾಲಕರಾಗಿ ಶಾಲಾ ಮುಖೋಪಾಧ್ಯಾಯರು ಭೀಮಪ್ಪ, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಮಂಗಳಾ ಸಜ್ಜನ್, ಕಾರ್ಯಕ್ರಮವನ್ನು ನೆರವೇರಿಸಿದರು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಶ್ರೀಮತಿ ಸುಮಂಗಲ ಸಜ್ಜನ್ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ 2015 ರಲ್ಲಿ ಭಾರತ ಸರ್ಕಾರವು ಭೇಟಿ ಬಚಾವೋ, ಬೇಟಿ ಪಢಾವೋ (BBBP) ಯೋಜನೆಯನ್ನು ದೇಶದಲ್ಲಿ ಲಿಂಗ ತಾರತಮ್ಯ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಕಳವಳವನ್ನು ಪರಿಹರಿಸಲು ಪರಿಚಯಿಸಿತು. ಭೇಟಿ ಬಚಾವೋ, ಭೇಟಿ ಪಢಾವೋ ಎಂಬ ಹೆಸರು ‘ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವಿಗೆ ಶಿಕ್ಷಣ ನೀಡಿ’ ಎಂದು ಅನುವಾದಿಸುತ್ತದೆ. ಮಗ ಮತ್ತು ಮಗಳು ಸಮಾನರು ಎನ್ನುವುದು ನಮ್ಮ ಮಂತ್ರವಾಗಿರಬೇಕು.
“ಹೆಣ್ಣು ಮಕ್ಕಳ ಜನನವನ್ನು ನಾವು ಖುಷಿಯಿಂದ ಸಂಭ್ರಮಿಸಬೇಕು. ನಾವು ನಮ್ಮ ಹೆಣ್ಣು ಮಕ್ಕಳ ಬಗ್ಗೆ ಒಂದೇ ರೀತಿಯ ಅಭಿಮಾನ ಹೊಂದಿರಬೇಕು. ನಿಮ್ಮ ಪುತ್ರಿಯ ಜನನವಾದಾಗ ಕನಿಷ್ಟ 5 ಗಿಡಗಳನ್ನು ನೆಟ್ಟು ಸಂಭ್ರಮಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ,
2015ರ ಜನವರಿ 22 ರಂದು ಪ್ರಧಾನ ಮಂತ್ರಿಯವರು ಹರಿಯಾಣದ ಪಾಣಿಪತ್ ನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗೆ ಚಾಲನೆ ನೀಡಿದರು. ಮಕ್ಕಳ ಲಿಂಗಾನುಪಾತ ಹಾಗೂ ಮಹಿಳಾ ಸಬಲೀಕರಣದ ಸಮಸ್ಯೆಗಳಿಗೆ ಈ ಯೋಜನೆ ಉತ್ತರ ಕಂಡುಕೊಳ್ಳಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಾನವ ಸಂಪನ್ಮೂಲಾಭಿವೃದ್ಧಿ ಇಲಾಖೆಗಳ ಜಂಟಿ ಚಿಂತನೆಯ ಫಲವಾಗಿ ಈ ಯೋಜನೆ ರೂಪಿತವಾಗಿದೆ,ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಅನುಷ್ಠಾನ ಮತ್ತು ರಾಷ್ಟ್ರವ್ಯಾಪಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಮೊದಲ ಹಂತದಲ್ಲಿ ದೇಶದ 100 ಜಿಲ್ಲೆಗಳಲ್ಲಿ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ತರಬೇತಿ, ವಿಚಾರದ ಅರಿವು, ಜಾಗೃತಿ ಕಾರ್ಯಕ್ರಮಗಳು ಮತ್ತು ತಳಮಟ್ಟದಲ್ಲಿ ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಜನರ ಮನಸ್ಸಿನಲ್ಲಿಯೇ ಬದಲಾವಣೆ ತರುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು ಈ ಸಂದರ್ಭದಲ್ಲಿ, ಕೆ.ಎಚ್ .ಪಿ.ಟಿ. ಅಧಿಕಾರಿಗಳಾದ, ಶ್ರೀಮತಿ ನೀಲಮ್ಮ, ಹಾಗೂ,ರಾಘವೇಂದ್ರ,
, ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಲತಾ ಹಳ್ಳಿಕೇರಿ, ಅಂಗನವಾಡಿ ಶಾಲಾ ಶಿಕ್ಷಕಿಯರಾದ,ಶ್ರೀಮತಿ ಪಲ್ಲವಿ, ಗಿರಿಜಮ್ಮ ,ನೀಲಮ್ಮ ,ಲಕ್ಷ್ಮಿ, ಶಶಿಕಲಾ, ಸವಿತಾ ಮಂಜುಳಾ, ಸವಿತಾ ಮುದ್ದಿ, ಕವಿತಾ, ಲಲಿತಾ ಹಾಗೂ ಅಂಗನವಾಡಿ ಶಾಲೆಯ ತಾಯಂದಿರಾದ, ಶ್ರೀಮತಿ ಶಾಂತಮ್ಮ ಹೂಗಾರ್ ಹಾಗೂ ಅನ್ನಪೂರ್ಣಮ್ಮ,, ಆಶಾ ಕಾರ್ಯಕರ್ತೆಯಾದ ಶಿವಲೀಲಾ ಗ್ರಾಮದ ಗುರುಹಿರಿಯರೂ ಮಹಿಳೆಯರು ಮಕ್ಕಳು ಭಾಗಿಯಾಗಿದ್ದರು.
ವರದಿ-ಮೌನೇಶ. ಹೆಚ್.ಮದ್ಲೂರು