ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರಸಭೆ ಕಾರ್ಯಾಲಯ ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಪೌರ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮವನ್ನು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.
ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಪೌರ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯು ಸಿ, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದoತಹ ಪೌರ ಕಾರ್ಮಿಕ ಮಕ್ಕಳಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಶಾಸಕರು ಮಾತನಾಡಿ ನಗರ ಪಟ್ಟಣಗಳು ಸ್ವಚ್ಛವಾಗಿರಬೇಕಾದರೆ ಪೌರ ಕಾರ್ಮಿಕರ ಸೇವೆ ಅಪಾರವಾಗಿದೆ, ಪೌರ ಕಾರ್ಮಿಕರು ದಿನ ಬೆಳಗಾದರೆ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ತಮ್ಮ ಸೇವೆಯನ್ನು ಮಾಡುತ್ತಾರೆ,ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವ ನಿಟ್ಟಿನಲ್ಲಿ ತಮ್ಮ ಬದುಕನ್ನು ಉತ್ತಮಗೊಳಿಸಿಕೊಳ್ಳಬೇಕು,ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಳಮಟ್ಟದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಹಕ್ಕುಗಳನ್ನು ಕೊಟ್ಟಿದ್ದಾರೆ, ಆದ್ದರಿಂದ ಮೀಸಲಾತಿಯಲ್ಲಿ ಇರುವಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಯಾವುದೇ ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಬಹಳ ಮುಖ್ಯ ಆದ್ದರಿಂದ ಪೌರ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಸಾಧನೆಗಳನ್ನು ಮಾಡಲು ಪ್ರೋತ್ಸಾಹವನ್ನು ನೀಡಬೇಕು.
ಸರ್ಕಾರ ಪೌರ ಕಾರ್ಮಿಕ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿ ಪೌರ ಕಾರ್ಮಿಕರಿಗೆ ಮನೆಗಳನ್ನು ಕೊಡಿಸಿದೆ ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸಕ್ಕೂ ವಿಶೇಷ ಸೌಲಭ್ಯಗಳನ್ನು ಒದಗಿಸಿಕೊಟ್ಟಿದೆ ಆದ್ದರಿಂದ
ತಾವುಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ರೇಖಾ ರಮೇಶ್, ಉಪಾಧ್ಯಕ್ಷರಾದ ಎ. ಪಿ. ಶಂಕರ್, ಸದಸ್ಯರಾದ ಬಸ್ತೀಪುರ ಶಾಂತರಾಜು, ಜಿ. ಪಿ ಶಿವಕುಮಾರ್, ರಾಘವೇಂದ್ರ, ಮಂಜುನಾಥ್, ಮಾಜಿ ಸದಸ್ಯರಾದ ಮನೋಹರ್, ರಮೇಶ್, ರಾಮಕೃಷ್ಣ, ನಗರಸಭೆ ಆಯುಕ್ತ ಎ. ರಮೇಶ್, ಪರಶಿವಮೂರ್ತಿ, ಚೇತನ್ ಹಾಗೂ ಇನ್ನಿತರರು ಇದ್ದರು.
ವರದಿ:ಉಸ್ಮಾನ್ ಖಾನ್