ಶಿವಮೊಗ್ಗ : ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮದಲ್ಲಿ 2024ನೇ ಸಾಲಿನ “ಮಲೆನಾಡು ಬಹುಮಖಿ ಪ್ರತಿಭೆ ಪ್ರಶಸ್ತಿ” ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ, ಪಾಲಿಕೆಯ ಆಯುಕ್ತೆ ಕವಿತಾ ಯೋಗಪ್ಪನವರ್, ಮಾಜಿ ಪಾಲಿಕೆ ಸದಸ್ಯರಾದ ವಿಶ್ವಾಸ್, ಹೆಚ್.ಸಿ.ಯೋಗೀಶ್ , ರಘು ಗುಂಡ್ಲು ಸೇರಿದಂತೆ ಹಲವರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.




















