ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಗಣ ಹೋಮ ,ಆಯುಧ ಪೂಜಾ

ಹೊನ್ನಾಳಿ ಪಟ್ಟಣದಲ್ಲಿ ಇರುವ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಗಣ ಹೋಮ ಹಾಗೂ ಲಕ್ಷ್ಮಿ ಪೂಜೆ ಹಾಗೂ ಆಯುಧ ಪೂಜೆ ಸಡಗರ ಸಂಭ್ರಮದಿಂದ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದಂತ ಸಂಸ್ಥೆಯ ಹೊಸಕೇರಿ ಸುರೇಶ್ ಸಂಸ್ಥೆಯ ಸ್ಥಾಪನೆ ಮತ್ತು ಅದರ ಕಾರ್ಯವನ್ನು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ) ಹೊನ್ನಾಳಿ 1982 ರಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಸಾಮರ್ಥ್ಯ ವರ್ಧನೆಗೆಂದು ಪ್ರಾರಂಭಗೊಂಡ ಈ ಸಂಸ್ಥೆ ಇಂದು ದೇಶದ ಪ್ರಮುಖ ಸ್ವಯಂಸೇವಾ ಸಂಸ್ಥೆಗಳಲ್ಲೊಂದಾಗಿ ಮೂಡಿ ಬಂದಿದೆ. ಸರಿಸುಮಾರು 42 ವರ್ಷಗಳ ಸುದೀರ್ಘ ಪ್ರಯಾಣದಲ್ಲಿ ಮಹಿಳಾ ಸಬಲೀಕರಣ, ಆರ್ಥಿಕ ಸ್ವಾವಲಂಭನೆ, ಕೌಶಲ್ಯಭಿವೃದ್ಧಿ ಸಬಲೀಕರಣ, ಕೃಷಿ ಅಭಿವೃದ್ಧಿ ಕಾರ್ಯಕ್ರಮ, ಹೀಗೆ ಹಲವಾರು ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಹೊನ್ನಾಳಿ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ (ರಿ). ಸಂಸ್ಥೆಯು 2012-13 ನೇ ಸಾಲಿನಲ್ಲಿ ಆರಂಭಗೊಂಡಿದ್ದು, ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿ ಸುಸ್ಥಿರ ಪ್ರಗತಿಯ ಅನೇಕ ಮಾದರಿಯನ್ನು ಯೋಜನೆಯು ಪ್ರಾರಂಭಿಸಿದೆ. ತನ್ನ ಪಾಲುದಾರ ಕುಟುಂಬಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಬ್ಯಾಂಕುಗಳು, ವಿಮಾಕಂಪನಿಗಳು, ಸರಕಾರದ ಪ್ರತಿನಿಧಿಯಾಗಿ ಬಡಜನರಿಗೆ ಉತ್ತಮ ರೀತಿಯಲ್ಲಿ ಸೌಲಭ್ಯಗಳನ್ನು ಒದಗಿಸಿಕೊಡಲು ಯೋಜನೆಯು ಯಶಸ್ವಿಯಾಗಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಯೋಜನಾಧಿಕಾರಿ ಶಾಂತರಾಮ್ ವಿಠ್ಠಲ್ ನಾಯಕ್
ಕುಮಾರಸ್ವಾಮಿ, ಕತ್ತಗಿ ನಾಗರಾಜ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

ವರದಿ ಪ್ರಭಾಕರ್ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!