ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಪಂಚ ಗ್ಯಾರಂಟಿ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ : ಕುಸನೂರ ಗ್ರಾಮಸ್ಥರ ಆಕ್ರೋಶ

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಕೆಲಸ ಮಾಡುತ್ತಿದೆ ಎಂದು ಕುಸನೂರ ಗ್ರಾಮಸ್ಥರಾದ ಮಂಜುನಾಥ ಬರಗಾಲಿ ಅವರು ಆರೋಪಿಸಿದರು.
ಈ ಕುರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಮನವಿ ಮಾಡಿರುವ ಅವರು,ರಾಜ್ಯದ ಜನರಿಗೆ ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ತಿಂಗಳು 200 ಯುನಿಟ್‌ಗಳವರೆಗೂ ಉಚಿತವಾಗಿ ವಿದ್ಯುತ ನೀಡುತ್ತೇವೆ ಎಂದು ಹೇಳಿರುತ್ತಾರೆ.ಆದರೆ ಕುಸನೂರ ಗ್ರಾಮದ ಜನರಿಗೆ ವಿದ್ಯುತ್ ಬಿಲ್‌ಗಳನ್ನು ನೀಡುವ ಮೂಲಕ ಗ್ರಾಮಸ್ಥರಿಗೆ ಕರೆಂಟ್ ಶಾಕ್ ಹೊಡೆದಂತಾಗಿದೆ ಎಂದರು.ಪ್ರತಿಯೊಬ್ಬ ವಿದ್ಯುತ್ ಬಳಕೆದಾರನಿಗೆ 30 ರಿಂದ 40 ಸಾವಿರ ರೂಪಾಯಿವರೆಗೂ ವಿದ್ಯುತ್ ಬಿಲ್‌ಗಳನ್ನು ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ಅಧಿಕಾರಿಗಳು ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ.

ಈ ರೀತಿ ಕಡು ಬಡವರು ಹಾಗೂ ದಿನಗೂಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ರೀತಿ ಬಿಲ್‌ಗಳನ್ನು ನೀಡಿದರೆ, ಸಾರ್ವಜನಿಕರು ಯಾರ ಮೊರೆ ಹೋಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು‌‌? ನಂತರ ಸ್ಥಳಕ್ಕೆ ಭೇಟಿ ನೀಡಿದ ಜೆಸ್ಕಾಂ ವಿಭಾಗದ ಅಧಿಕಾರಿಗಳು ಗ್ರಾಮಸ್ಥರ ಬಳಿ ಎರಡು ದಿನಗಳು ಕಾಲವಕಾಶ ನೀಡಬೇಕು ಎಂದು ಬಳಿ ಮನವಿ ಮಾಡಿಕೊಂಡರು. ನಂತರ ಗ್ರಾಮಸ್ಥರು ಮಾತನಾಡಿ, ಅದಷ್ಟು ಬೇಗ ಜನರ ಸಮಸ್ಯೆಗೆ ಸಹಕರಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಾಜಿ ಪಾಶ,ರೇವಣಸಿದ್ದ ಚೇಗಂಟಿ,
ಉದಯಕುಮಾರ ಹಾದಿಮನಿ,ಅಂಬರಾಯ ತಲ್ವಾರ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ