ಕೊಪ್ಪಳ: 23.10.2024 ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಸನ್ಮಾನವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಸನ್ಮಾನ್ಯ ಶ್ರೀ ಬಸವರಾಜ ರಾಯರೆಡ್ಡಿ ಅವರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ್ ಉಳ್ಳಾಗಡ್ಡಿ ಹನುಮಂತಗೌಡ ಚಂದೂರು, ಮುಖಂಡರಾದ ಮಹೇಶ್ ಹಳ್ಳಿ ,ವೀರನಗೌಡ ಬಳೂಟಗಿ, ಶಿವನಗೌಡ ದಾನರೆಡ್ಡಿ, ಶರಣಪ್ಪ ಗಾಂಜಿ ,ಹುಲುಗಪ್ಪ ಬಂಡಿವಡ್ಡರ್, ರೇವಣಪ್ಪ ಸಂಗಟಿ, ಅಶೋಕ್ ತೋಟಲ್, ಮಲ್ಲು ಚಕ್ಲಿ, ಸಂಗಮೇಶ್ ಗುತ್ತಿ, ಮಂಜುನಾಥ್ ಕಡೆಮನಿ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.
ವರದಿ:ಮೌನೇಶ ಎಚ್ ನಾಯಕ