ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ದೀಪಾವಳಿ ಸಮಯದಲ್ಲಿ ಬರುವ ಗೋವತ್ಸ ದ್ವಾದಶಿ ಮಹತ್ವ, ಸನಾತನ ಸಂಸ್ಥೆಯ ವಿಶೇಷ ಲೇಖನ!

ಇತಿಹಾಸ :
ಸಮುದ್ರಮಂಥನದಿಂದ ಐದು ಕಾಮಧೇನುಗಳು ಉತ್ಪನ್ನವಾದವು ಎನ್ನುವ ಕಥೆ ಇದೆ. ಇದು ಅವುಗಳಲ್ಲಿ ‘ನಂದಾ’ ಎನ್ನುವ ಹೆಸರಿನ ಕಾಮಧೇನುವಿಗೆ ಸಂಬಂಧಿಸಿದ ವ್ರತವಾಗಿದೆ.

ಉದ್ದೇಶ :
ಈ ಜನ್ಮ ಮತ್ತು ಮುಂದಿನ ಅನೇಕ ಜನ್ಮಗಳಲ್ಲಿನ ಮನೋಕಾಮನೆಗಳು ಪೂರ್ಣವಾಗಬೇಕು ಮತ್ತು ಪೂಜೆಯನ್ನು ಮಾಡುತ್ತಿರುವ ಆಕಳ ಶರೀರದ ಮೇಲೆ ಎಷ್ಟು ರೋಮಗಳು (ಕೂದಲುಗಳು) ಇವೆಯೋ ಅಷ್ಟು ವರ್ಷಗಳ ಕಾಲ ಸ್ವರ್ಗದಲ್ಲಿ ಸ್ಥಾನ ಸಿಗಬೇಕೆಂದು ಈ ಹಬ್ಬವನ್ನು ಆಚರಿಸುತ್ತಾರೆ.
ಹಬ್ಬವನ್ನು ಆಚರಿಸುವ ಪದ್ಧತಿ : ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರುಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.

ಗೋವತ್ಸದ್ವಾದಶಿಯ ಮಹತ್ವ:
ಆಕಳಿನ ಪೂಜೆಯನ್ನು ಮಾಡಿ ಅವಳಲ್ಲಿರುವ ಸಾತ್ತ್ವಿಕ ಗುಣಗಳನ್ನು ಸ್ವೀಕರಿಸುವುದು: ಭಾರತೀಯ ಸಂಸ್ಕೃತಿಯಲ್ಲಿ ಆಕಳಿಗೆ ತುಂಬಾ ಮಹತ್ವವಿದೆ. ಅವಳನ್ನು ಮಾತೆಯೆಂದು ಸಂಬೋಧಿಸಲಾಗುತ್ತದೆ. ಅವಳು ಸಾತ್ತ್ವಿಕಳಾಗಿರುವುದರಿಂದ ಅವಳ ಪೂಜೆಯನ್ನು ಮಾಡಿ ಎಲ್ಲರೂ ಅವಳ ಸಾತ್ತ್ವಿಕ ಗುಣಗಳನ್ನು ಸ್ವೀಕರಿಸುವುದಿರುತ್ತದೆ. ತನ್ನ ಸಹವಾಸದಿಂದ ಇತರರನ್ನು ಪಾವನ ಗೊಳಿಸುವ, ತನ್ನ ಹಾಲಿನಿಂದ ಸಮಾಜ ವನ್ನು ಬಲಿಷ್ಠಗೊಳಿಸುವ, ಕೃಷಿಗಾಗಿ ತನ್ನ ಸೆಗಣಿಯಿಂದ ಗೊಬ್ಬರವನ್ನು ನೀಡುವ, ಕೃಷಿಗೆ ಉಪಯುಕ್ತವಾದ ಎತ್ತುಗಳಿಗೆ ಜನ್ಮ ನೀಡುವ, ಶ್ರೀಕೃಷ್ಣನಿಗೆ ಪ್ರಿಯವಾಗಿರುವ ಹಾಗೂ ಎಲ್ಲ ದೇವತೆಗಳು ತನ್ನಲ್ಲಿ ವಾಸಿಸುವಂತಹ ಯೋಗ್ಯತೆಯಿರುವ ಗೋಮಾತೆಯನ್ನು ಈ ದಿನದಂದು ಪೂಜೆ ಮಾಡಬೇಕು. ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆಯೋ ಹಾಗೂ ಪೂಜ್ಯ ಭಾವದಿಂದ ಅವಳನ್ನು ಪೂಜಿಸಲಾಗುತ್ತದೆಯೋ, ಅಲ್ಲಿನ ವ್ಯಕ್ತಿಗಳು, ಆ ಸಮಾಜ ಮತ್ತು ಆ ರಾಷ್ಟ್ರದ ಸಮೃದ್ಧಿಯು ನಿಶ್ಚಿತವಾಗಿ ಆಗುತ್ತದೆ. ಇಂತಹ ಗೋಮಾತೆಯನ್ನು ಅವಳ ಕರುಗಳ ಸಹಿತ ಪೂಜಿಸಿ ದೀಪೋತ್ಸವವನ್ನು (ದೀಪಾವಳಿಯನ್ನು) ಆಚರಿಸಬೇಕು.

ಗುರುದ್ವಾದಶಿ:
ಆಶ್ವಯುಜ ಕೃಷ್ಣ ದ್ವಾದಶಿ ಶಿಷ್ಯರು ಈ ದಿನ ಗುರುಗಳ ಪೂಜೆಯನ್ನು ಮಾಡುತ್ತಾರೆ.

ಆಧಾರ: ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು’

ಸಂಗ್ರಹ : ಶ್ರೀ. ವಿನೋದ ಕಾಮತ್ ರಾಜ್ಯ ವಕ್ತಾರರು, ಸನಾತನ ಸಂಸ್ಥೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ