ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಉಪ ವಿಭಾಗಾಧಿಕಾರಿ ಅಭಿಷೇಕ್ ವಿ ಅಂಗಡಿಗಳ ನಾಮಫಲಕಗಳು ನಮ್ಮ ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯಲ್ಲೇ ಇರಬೇಕು ಇಲ್ಲದಿದ್ದಲ್ಲಿ ಪರವಾನಿಗೆಯನ್ನು ಕೊಡಬೇಡಿ ಎಂದು ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿದರು.
ಆಡಳಿತ ಭಾಷೆ ಕನ್ನಡದಲ್ಲಿ ಇರಬೇಕು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಮೂಲಕ ನೆಲ ಜಲ ಭಾಷೆ ಸಾಹಿತ್ಯ ಸಂಸ್ಕೃತಿ ಬಿಂಬಿಸುವ ಕೆಲಸ ಮಾಡಲು ಸಾಧ್ಯ ಎಂದು ಹೇಳಿದರು.ಡಾ|| ಬಸನರಾಜಪ್ಪ ಕನ್ನಡ ಭಾಷ ಶಿಕ್ಷಕರು ಉಪನ್ಯಾಸದಲ್ಲಿ ಹಲ್ಮಿಡಿ ಶಾಸನದಿಂದ
1950 ರ ಏಕೀಕರಣ ರಾಜ್ಯರಚನೆ ಹಾಗೂ ಮೈಸೂರು ರಾಜ್ಯ ಎಂಬ ಹೆಸರಿನಿಂದ ಕರ್ನಾಟಕ ರಾಜ್ಯ ನಾಮಕರಣ ಮಾಡಿ 51 ವರ್ಷದ ಉಪನ್ಯಾಸ ಮಾಡಿದರು ನಂತರ ಯುವ ಶಕ್ತಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಶಾಸಕ ಶಾಂತನಗೌಡರು ಡಿ ಜಿ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಮತ್ತು ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು
ಕನ್ನಡ ನಾಡು ನುಡಿ ಸಂಸ್ಕೃತಿ ಕಟ್ಟಿ ಬೆಳೆಸಿದ ವೀರರಿಗೆ ಮತ್ತು ನೆಲ ಜಲ ಭಾಷೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸಲು ನಾವೇಲ್ಲರು ಕನ್ನಡವನ್ನು ಹೆಚ್ಚಾಗಿ ಮಾತನಾಡುವುದರ ಮುಖಾಂತರ ನಮ್ಮ ಕನ್ನಡ ಭಾಷೆಯನ್ನು ಬೆಳೆಸಬೇಕೆಂದರು ಶ್ರೀ ಭುವನೇಶ್ವರಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿಕೂಡುವ ಭರವಸೆ ನೀಡಿದರು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳಗ ಕಾರ್ಯಕ್ರಮಗಳಿಗೆ ಗೈರು ಹಾಜರಾಗದ್ದಂತೆ ಅಧಿಕಾರಿಗಳಿಗೆ ಸೂಚನೆ ನೀಡಲು ತಾಲ್ಲೂಕು ಆಡಳಿತಕ್ಕೆ ತಿಳಿಸಿದರು.
ತಾಯಿ ಭುವನೇಶ್ವರಿ ದೇವಿಯ ಪೋಟೋವನ್ನು ಗಜರಾಜನ ಮೇಲೆ ಪ್ರತಿಷ್ಠಾಪಿಸಲಾಗಿತ್ತು ಪಟ್ಟಣದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಯಿತು ಇದರಲ್ಲಿ ಹೊಸಕೇರಿ ಸುರೇಶ್ ಇವರ ಕನ್ನಡ ರಥ ವಿಶೇಷವಾಗಿ ಗಮನ ಸೆಳೆಯಿತು ಶಾಲೆಯ ಮಕ್ಕಳು ,ಶಿಕ್ಷಕರು ಮತ್ತು ಡೋಳ್ಳು ಕುಣಿತ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ 125 ಅಂಕಗಳಿಸಿದ ತಾಲ್ಲೂಕಿನ 37 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ