ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಮ್ಮಿಲ್ ಪಾಷ ಮತ್ತು ಸಮಿತಿಯ ವತಿಯಿಂದ ಇತ್ತೀಚೆಗೆ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರುಗಳಾದ ಸಿ ಟಿ ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಚಕ್ರವರ್ತಿ ಸೂಲಿಬೆಲೆ ಇವರು ಭಾಷಣ ಮಾಡುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟು ಅವಮಾನಿಸುವ ರೀತಿಯಲ್ಲಿ ಮತ್ತು ಕೋಮು ಗಲಭೆ ಪ್ರಚೋದನೆ ನೀಡುವ ಸಂವಿಧಾನ ವಿರೋಧಿ ಭಾಷಣವನ್ನು ಮಾಡಿ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಮುಖಂಡರಾದ ಸುಹೈಲ್ ಅಹಮದ್, ನೂರ್ ಹುಸೇನ್, ರಹಮತ್, ಇಜ್ಜು, ಅದ್ದು, ಶಬ್ಬೀರ್ ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.