ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ತಾಲೂಕಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತ್ರಿಪುರಾಂತ್ ಮಾರ್ಗವಾಗಿ ನಗರದ ಹೊರ ವಲಯದಲ್ಲಿರುವ ಮಿನಿ ವಿಧಾನ ಸೌಧದ ಕಛೇರಿ ವರೆಗೆ ಶಾಸಕ ಶರಣು ಸಲಗರ್ ಅವರ ನೇತೃತ್ವದಲ್ಲಿ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಸೇರಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುತ್ತಾ ಬೃಹತ್ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಶಾಸಕರು ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಹಾಗೂ ಜನಸಾಮಾನ್ಯರ ಭೂಮಿಯನ್ನು ಅಕ್ರಮವಾಗಿ ವಕ್ಫ್ ಬೋರ್ಡಗೆ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗು ವಕ್ಫ್ ಬೋರ್ಡ್ ವಿರುದ್ಧ ಕೆಲ ಕಾಲ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಾನ್ಯ ತಹಶೀಲ್ದಾರ್ ಅವರಿಗೆ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಲಾಯಿತು.
ವರದಿ: ಸಂದೀಪ್ ಕುಮಾರ್