ಮೈಸೂರು : ಕರ್ನಾಟಕ ರಾಜ್ಯೋತ್ಸವದ ದಿನದಂದು ಎಂಇಎಸ್ ಪುಂಡರು ಬೆಳಗಾವಿ ಯಲ್ಲಿ ಕರಾಳ ದಿನ ಆಚರಣೆ ಮಾಡಿರುವುದಕ್ಕೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರಾಳ ದಿನಾಚರಣೆ ಮಾಡಿದವರ ವಿರುದ್ಧ ಕೇವಲ ಎನ್‌ಸಿಆರ್ ದಾಖಲಿಸಿ ಕಳುಹಿಸುತ್ತಿದ್ದಾರೆ, ಕೂಡಲೆ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕರಾಳ ದಿನಾಚರಣೆಗೆ ಸುರಕ್ಷತೆ ಒದಗಿಸಿದ ಪೋಲಿಸರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಕನ್ನಡ ಚಳವಳಿಗಾರ ತೇಜಸ್ವಿ ಆಗ್ರಹಿಸಿದ್ದಾರೆ.
ನವೆಂಬರ್ 1 ರ ಪೂರ್ವ ದಿನವೇ ಜಿಲ್ಲಾಧಿಕಾರಿಗಳು ಎಂ ಇ ಎಸ್ ಪುಂಡರಿಗೆ ರಾಜ್ಯ ವಿರೋಧಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದರು.ಆದರೂ ಸಹ ಕರ್ನಾಟಕ ರಾಜ್ಯೋತ್ಸವದ ದಿನದಂದು ಕರಾಳ ದಿನಾಚರಣೆ ಆಚರಿಸಿದ್ದಾರೆ ಇದರಿಂದ ಪೋಲಿಸರ ಕರ್ತವ್ಯ ಲೋಪ ಎದ್ದು ಕಾಣುತ್ತದೆ ಎಂದು ತೇಜಸ್ವಿ ಹೇಳಿದ್ದಾರೆ.
ಕಾರಣ ಕರಾಳ ದಿನಾಚರಣೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ