ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕೈ ಬಿಡಲು ತೇಜಸ್ವಿ ಮನವಿ

ಮೈಸೂರು : ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ನಿರಂತರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿರುವ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಹೋರಾಟದ ಪ್ರಕರಣಗಳನ್ನು ಕೈ ಬಿಡಬೇಕು ಎಂದು ಕೋರಿದ್ದಾರೆ.

ಕೆ ಜೆ ಹಳ್ಳಿ, ಡಿ ಜೆ ಹಳ್ಳಿ ಯಲ್ಲಿ ಗಲಭೆ ನಡೆಸಿದವರ ಪ್ರಕರಣವನ್ನು ವಾಪಸು ಪಡೆಯಲಾಗಿದೆ,ಆದರೆ ನಾಡು ನುಡಿ ನೆಲ ಜಲ ಭಾಷೆ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲೆ ಕೇಸು ಹಾಕಿ ಇನ್ನೂ ಹಿಂಪಡೆಯದಿರುವುದು ದುರಂತ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೂಡಲೇ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೂಡಾ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೇಜಸ್ವಿ ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ