ಶಿವಮೊಗ್ಗ : ದಿನಾಂಕ: 08/11/2024 ರ ಶುಕ್ರವಾರದಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ನವುಲೆಯ ಕೃಷಿ ಮಹಾವಿದ್ಯಾಲಯದ ” ಎಂ ಎಸ್ ಸ್ವಾಮಿನಾಥನ್ ” ಸಭಾಂಗಣದಲ್ಲಿ ” ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು ” ವಿಷಯದ ಕುರಿತು ಸಮಗ್ರವಾದ ಮಾಹಿತಿ ನೀಡುವ ಒಂದು ದಿನದ ತರಬೇತಿ ಕಾರ್ಯಗಾರವನ್ನು spice board ( ಸಾಂಬಾರು ಮಂಡಳಿ ) ವತಿಯಿಂದ ಹಮ್ಮಿಕೊಂಡಿದ್ದು, ಈ ಕಾರ್ಯಾಗಾರದಲ್ಲಿ ತೀರ್ಥಹಳ್ಳಿ ತಾಲೂಕಿನ ಕೃಷಿಕರು ಭಾಗವಹಿಸಬಹುದಾಗಿದೆ. ಭಾಗವಹಿಸಲು ಇಚ್ಚಿಸುವ ರೈತರು 9108280642 ಈ ನಂಬರ್ ಗೆ ಕರೆ ಮಾಡಿ ತಿಳಿಸಬೇಕಾಗಿ ಶ್ರೀ ಸೋಮಶೇಖರ್,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,
ತೀರ್ಥಹಳ್ಳಿ ಇವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
