ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಇಂದು ಕರೆಯಲಾಗಿದ್ದ ಕನಕ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆಯು ಶಾಸಕ ಎಂ.ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ, ಮುಖಂಡರ ಸಮ್ಮುಖದಲ್ಲಿ ಜರುಗಿತು.
ದಿನಾಂಕ 18 ರಂದು ಕನಕ ಜಯಂತಿಯನ್ನು ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ, ನಂತರ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳ ತೀರ್ಮಾನದಂತೆ ಮುಂದಿನ ದಿನಗಳಲ್ಲಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ, ಮುಂದಿನ ದಿನಗಳಲ್ಲಿ ದಿನಾಂಕವನ್ನು ನಿಗದಿಗೊಳಿಸಲಾಗುವುದು ಹೀಗಾಗಿ ಎಲ್ಲರೂ ಸಹಕಾರ ನೀಡಬೇಕು, ಕನಕ ಜಯಂತಿ ಅದ್ದೂರಿ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರುಪ್ರಸಾದ್, ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ , ಬಿಇಓ ಗುರುಲಿಂಗಯ್ಯ ,ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನಂಜಮಣಿ, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮುಮ್ತಾಜ್ ಬಾನು, ಉಪಾಧ್ಯಕ್ಷರಾದ ಆನಂದ್ ಕುಮಾರ್, ಎಇಇ ಶಂಕರ, ಸಮುದಾಯದ ಮುಖಂಡರುಗಳಾದ,ಕೆ.ಎಂ. ಜಗನಾಥ್,ಶಿವಪ್ಪ,ವೆಂಕಟೇಗೌಡ,ಚಂದ್ರು,ಮಹದೇವಸ್ವಾಮಿ,ಚಿನ್ನರಾಜ್,ಕಾಮರಾಜು,ರವಿ,ವೆಂಕಟೇಶ್,ಮಲ್ಲಣ್ಣ,ಜಡೆಸ್ವಾಮಿ ಸೇರಿದಂತೆ ಇನ್ನಿತರರು ಮುಖಂಡರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್