ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಮನವಿ ಸಲ್ಲಿಸಿದ ಪ್ರಮೋದ್ ಎಂ ದೊರೆ ಯಡ್ರಾಮಿ

ಕರ್ನಾಟಕ ರಾಜ್ಯದ 74 ಆದರ್ಶ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರಮೋದ್ ಎಂ ದೊರೆ ಯಡ್ರಾಮಿ.

ಕಲಬುರಗಿ: ಕರ್ನಾಟಕ ರಾಜ್ಯದ 74 ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಪ್ರಮೋದ್ ಎಂ ದೊರೆ ಯಡ್ರಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ ಮನವಿ ಪತ್ರದ ಮೂಲಕ ಅಗ್ರಹಿಸಿದ್ದಾರೆ. ಸುಮಾರು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ 74 ಆದರ್ಶ ವಿದ್ಯಾಲಯಗಳಿದ್ದು ಈ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯವಿರುವುದಿಲ್ಲ ಇದರಿಂದ ಅಂದರೆ ಸುಮಾರು 60 ರಿಂದ 70 ಕಿಲೋ ಮೀಟರ್ ದೂರದ ಊರಿಂದ ಬರುವಂತಹ ವ್ಯಾಸಂಗ ಮಾಡಲು ಬರುವಂತಹ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳ ಅಭ್ಯಾಸದ ಮೆಲೆ ಕೆಟ್ಟ ಪರಿಣಾಮ ಬೀರುತ್ತಿದೆ ಇದರಿಂದ ವಿದ್ಯಾರ್ಥಿಗಳ ವ್ಯಾಸಂಗದಲ್ಲಿ ಹಿನ್ನಡೆಯಾಗಿ ಫಲಿತಾಂಶದ ಮೇಲೆ ದೊಡ್ಡ ಮಟ್ಟದ ಹೊಡೆತ ಬೀಳುತ್ತಿದೆ ಈ ವಿಷಯದ ಕುರಿತು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಯಾಕೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಎಲ್ಲ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವಿದೆ ! ಆದರೆ. ನಮ್ಮ ರಾಜ್ಯದ 74 ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಸತಿ ಸೌಲಭ್ಯ ಇಲ್ಲದಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ . ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಆದರ್ಶ ವಿದ್ಯಾಲಯ ಶಾಲೆಗಳನ್ನು ಸ್ಥಾಪನೆ ಮಾಡಲಾಗಿದೆ ನಮ್ಮ ರಾಜ್ಯದಲ್ಲಿ 74 ನಾಲ್ಕು ಆದರ್ಶ ವಿದ್ಯಾಲಯ ಶಾಲೆಗಳು ಇರುತ್ತದೆ ಆದರೆ ಯಾವುದೇ ಆದರ್ಶ ವಿದ್ಯಾಲಯ ಶಾಲೆಗೆ ವಸತಿ ಸೌಲಭ್ಯ ಇರುವುದಿಲ್ಲ ಹಾಗೂ ಅದೇ ರೀತಿಯಾಗಿ ಜೇವರ್ಗಿ ತಾಲೂಕಿನಲ್ಲಿಯು ಒಂದು ಆದರ್ಶ ವಿದ್ಯಾಲಯವಿರುತ್ತದೆ ಇಲ್ಲಿಯೂ ಸಹಿತ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವಿರುವುದಿಲ್ಲ ಆದ ಕಾರಣ ಸರ್ಕಾರವು ವಿದ್ಯಾರ್ಥಿಗಳಿಗೆ ವ್ಯಾಸಂಗದ ಹಿತದೃಷ್ಟಿಯಿಂದ ವಸತಿ ಸೌಲಭ್ಯವನ್ನು ಅತಿ ಶೀಘ್ರದಲ್ಲಿ ಒದಗಿಸಿ ಕೊಡಬೇಕು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕರ್ನಾಟಕ ರಾಜ್ಯದ ಆದರ್ಶ ವಿದ್ಯಾಲಯ ಶಾಲೆಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ವ್ಯಾಸಂಗದ ಹಿತದೃಷ್ಟಿಯಿಂದ ವಸತಿ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಪ್ರಮೋದ್ ಎಂ ದೊರೆ ಯಡ್ರಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ