ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೈದ್ಯಾಧಿಕಾರಿಗಳಿಲ್ಲದೆ ಅನಾಥವಾದ ಪ್ರಾಥಮಿಕ ಆರೋಗ್ಯ ಕೇಂದ್ರ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಿಲ್ಲದೆ ಅನಾಥವಾದ ಪ್ರಾಥಮಿಕ ಆರೋಗ್ಯ ಕೇಂದ್ರ.

ಈ ಆಸ್ಪತ್ರೆಗೆ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಸತ್ಯ ವೀರ ಕೊಡಬಾಗಿ ಅವರು ತಮ್ಮನ್ನು ತಾವೇ ಸರ್ವಾಧಿಕಾರಿ ಎಂದುಕೊಂಡು,ಸಮಯ ಪರಿಪಾಲನೆ ಎಂದರೆ ಏನೆಂದು ತಿಳಿಯದ ಇವರು ಕರ್ತವ್ಯ ನಿರತರಾಗಿದ್ದಾಗಲೂ, ಮದ್ಯಪಾನ ಸೇವನೆ ಮಾಡಿ ಆಸ್ಪತ್ರೆಗೆ ಬರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡುತ್ತಿದ್ದರೂ ಸಹ ಯಾವುದನ್ನೂ ಲೆಕ್ಕಿಸದೆ ಈ ಬಗ್ಗೆ ಪ್ರಶ್ನೆ ಮಾಡಿದವರಿಗೆ ಮರು ಪ್ರಶ್ನೆ ಮಾಡುವ ಮೂಲಕ ಕಾಲ ಹರಣ ಮಾಡುವ ಇವರ ವಿರುದ್ಧ ಇಲಾಖೆಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾಮಿಕಾವಸ್ಥೆಗೆ ಕೊಟ್ಟ ರಜಾ ಪತ್ರ:

ಹಲಕುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶಿಲ್ಪಾ ಬೆನಕನವಾರಿ ಅವರ ರಜೆಯ ಪತ್ರ ಹೆಸರಿಗೆ ಮಾತ್ರ ಸೀಮಿತವಾಗಿದ್ದು, ರಜೆಯಲ್ಲಿದ್ದಾಗಲೂ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿರುತ್ತಾರೆ.
ಶೀಘ್ರದಲ್ಲೇ ತಾಲ್ಲೂಕು ವೈದ್ಯಾಧಿಕಾರಿಗಳು ಈ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ವೈದ್ಯಾಧಿಕಾರಿಗಳನ್ನು ನೇಮಿಸುವ ಮೂಲಕ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತಾರೆ ಎನ್ನುವುದು ನಮ್ಮ ಆಶಯ.

ವರದಿ: ಪರಶುರಾಮ ಬಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!