ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ದೌರ್ಜನ್ಯಕ್ಕೆ ಒಳಗಾದ, ನೊಂದ ಯಾವುದೇ ಸಮುದಾಯ ವ್ಯಕ್ತಿಗಳಿಗೆ ಕಾನೂನು ನೆರವು, ಸಹಕಾರ

ಯಾದಗಿರಿ: ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ, ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮುದಾಯಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದಾಗಿದೆ, ದೌರ್ಜನ್ಯ ಒಳಗಾದ ಅಥವಾ ನೊಂದ ಯಾವುದೇ ಸಮುದಾಯ ವ್ಯಕ್ತಿಗಳು ಕಾನೂನು ನೆರವು ಪಡೆಯಬಹುದಾಗಿದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮರಿಯಪ್ಪ ಅವರು ಹೇಳಿದರು.

ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಯಾದಗಿರಿ ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ 2024ರ ನವೆಂಬರ್‌ದಲ್ಲಿ ಇತ್ತೀಚಿಗೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಯಾದಗಿರಿಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಭಾರತವು ಪ್ರತಿ ವರ್ಷ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸುತ್ತದೆ. 1993 ರಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಉಚಿತ ಕಾನೂನು ಅರಿವು ಮತ್ತು ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ತಿಳಿಸಲು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶ್ಯಾದ್ಯಂತ ಆಚರಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮೂದಾಯಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದಾಗಿದೆ. ದೌರ್ಜನ್ಯ ಒಳಗಾದ ಅಥವಾ ನೊಂದ ಯಾವುದೇ ಸಮೂದಾಯ ವ್ಯಕ್ತಿಗಳು ಕಾನೂನು ನೆರವು ಪಡೆಯಬಹುದಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ , ರಾಜ್ಯ ಮಟ್ಟದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳು , ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಮಟ್ಟದಲ್ಲಿ ಕಾನೂನು ಅರಿವು ಮತ್ತು ನೆರವು ನೀಡಲು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ರಾಜ್ಯ ಶಾಸ್ತ್ರ ಉಪನ್ಯಾಸಕರಾದ ಡಾ.ಉದಯಕುಮಾರ ದೊಡ್ಡಮನಿ ಅವರು ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಸಮಾನ್ಯ ನಾಗರಿಕರು ಕೂಡಾ ಸಂವಿಧಾನ ನೀಡಿದ ತಮ್ಮ ಹಕ್ಕುಗಳನ್ನು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು. ಪ್ರತಿಯೊಬ್ಬರು ಹಕ್ಕುಗಳು ಪಡೆಯಬೇಕು ಅದರಂತೆ ಕರ್ತವ್ಯಗಳನ್ನು ಕೂಡಾ ಪಾಲನೆ ಮಾಡಬೇಕು ಎಂದು ಹೇಳಿದರು.
ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಹರೀಶ್ ರಾಠೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಎಲ್ಲರಿಗೂ ಕಾನೂನಿನ ಮೂಲಕ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಕಾನೂನು ಸೇವಾ ಪ್ರಾಧಿಕಾರ ಶ್ರಮಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸಿಬ್ಬಂದಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ