ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಸಾಥ್ ಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉನ್ನತ ಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಸಾಥ್ ಖೇಡ ಗ್ರಾಮದ ಸರ್ಕಾರಿ ನೌಕರರು, ಶಿಕ್ಷಣ ಪ್ರೇಮಿಗಳು ಅಂಜಾದು ಒಂದು ಲಕ್ಷ ರುಪಾಯಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡುವ ಮೂಲಕ ಖಾಸಗಿ ಶಾಲೆಗಳೂ ಕೂಡಾ ಈ ಶಾಲೆಯ ಕಡೆ ತಿರುಗಿ ನೋಡುವಂತೆ ಮಾಡಿದ್ದಾರೆ.
ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುವುದೇ ಇಲ್ಲಿನ ಗ್ರಾಮಸ್ಥರ ಆಶಯವಾಗಿದೆ.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀ ಲಕ್ಷ್ಮಣ ಲಾಲ್ ಸಿರಿ ಅವರು ದೇಣಿಗೆ ನೀಡಿದ ದಾನಿಗಳಿಗೆ ಅಭಿನಂದಿಸಿದರು. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಗ್ರಾಮದವರು ಸಂಕಲ್ಪ ಮಾಡಿದ್ದೀರಿ ತಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಗ್ರಾಮದ ಸರ್ಕಾರಿ ನೌಕರರು ಹಾಗೂ ಶಿಕ್ಷಣ ಪ್ರೇಮಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರೆಂದು ಈರಣ್ಣ ಪೂಜಾರಿ ಸಾಥ್ ಖೇಡ ಹಾಗೂ ಸಿದ್ದು ಬಿಸಿ ನೇರಡಗಿ ಅವರು ಪತ್ರಿಕಾ ಮಾಧ್ಯಮದವರಿಗೆ ತಿಳಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ