ತುಮಕೂರು/ಪಾವಗಡ: ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸುವ ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಮತ್ತು ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲು ವೇಳಾ ಪಟ್ಟಿಯನ್ನು ನಿಗಧಿಪಡಿಸಲಾಗಿರುತ್ತದೆ.
ಅದರಂತೆ ಪಾವಗಡ ತಾಲ್ಲೂಕಿನ ಪುರಸಭೆ ಮತ್ತು ಗ್ರಾಮೀಣ ಭಾಗದ ಎಲ್ಲಾ 34 ಗ್ರಾಮ ಪಂಚಾಯಿತಿಗಳಲ್ಲಿ ಸಮೀಕ್ಷೆ ನಡೆಸುವ ವೇಳಾ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಅದರಂತೆ ಎಲ್ಲಾ ಸಮೀಕ್ಷೆ ನಡೆಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಾನಕಿರಾಮ್ ರವರು ತಿಳಿಸಿದರು.
ವರದಿ ಕೆ. ಮಾರುತಿ ಮುರಳಿ