ಮೈಸೂರು ನಗರದ ಕೃಷ್ಣ ರಾಜ ಕ್ಷೇತ್ರದಲ್ಲಿ ಇರುವ ಕಂಸಾಳೆ ಮಹದೇವಯ್ಯ ವೃತ್ತ ಅನೇಕ ತಿಂಗಳುಗಳಿಂದ ಶಿಥಿಲಗೊಂಡು ಉರುಳಿ ಬಿದ್ದಿದ್ದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ನಡೆಯನ್ನು ಖಂಡಿಸಿ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿ ಕಾರ್ಯ ಮಾಡಬೇಕು ಇಲ್ಲ ವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುವುದಾಗಿ ಕನ್ನಡ ಚುಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.