ಗದಗ: ಜನಪದ ಕೂಗು ಕಾರ್ಯಕ್ರಮದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಜನಪದ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಶ್ರೀ ಆದಿ ಮಲ್ಲಮ್ಮ ದೇವಿ ಅಭಿವೃದ್ಧಿ ಸೇವಾ ಟ್ರಸ್ಟ್ (ರಿ.) ಚಿಕ್ಕಬಳ್ಳಾಪುರ ಸಂಸ್ಥೆಯವರು 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪ್ರತಿಭಾ ಪುರಸ್ಕಾರದ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ, ದಿ. 22-11-2024ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
