ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಅವರನ್ನು ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ತಾಲೂಕು ರೂಪ್ಸ್ ಸಂಘಟನೆಯ ವತಿಯಿಂದ ರೂಪ್ಸ್ ಸಂಘಟನೆಯ ರಾಜ್ಯ ನಿರ್ದೇಶಕರಾದ ವೆಂಕಟೇಶ್ ವಕೀಲರು ಮತ್ತು ರೂಪ್ಸ್ ಸಂಘಟನೆಯ ತಾಲೂಕು ಅಧ್ಯಕ್ಷರಾದ ಶಿವಕುಮಾರ ಪಿ. ಅವರು ಪುಸ್ತಕ ನೀಡುವ ಮೂಲಕ ಸ್ವಾಗತಿಸಿ ಗೌರವಿಸಲಾಯಿತು.
ತಾಲ್ಲೂಕಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಅದಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶ್ರಮಿಸುತ್ತೇನೆ ಎಂದರು.
ರೂಪ್ಸ್ ಸಂಘಟನೆಯ ಕಾರ್ಯದರ್ಶಿ ಶರಣು ಹುಣಸಗಿ, ಸಂಘಟನೆಯ ಪದಾಧಿಕಾರಿಗಳಾದ ಸಿದ್ದಯ್ಯ ಸ್ವಾಮಿ ಮತ್ತು ಪ್ರಾಣೇಶ್ ಗಬ್ಬೂರು ಇದ್ದರು.
ವರದಿ: ಶರಣು ಹುಣಸಗಿ