ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಧರೇಪ್ಪ ಶಿವಪ್ಪ ಠಕ್ಕಣ್ಣವರ ಅವರು ಪಂಚಮಸಾಲಿ ಸಮಾಜದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ನೂತನ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾಗಿದ್ದಾರೆ.
ಕಬ್ಬೂರಿನಲ್ಲಿ ಜರುಗಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪಂಚಮಸಾಲಿ ಸಮಾಜದ ಸಂಘಟನಾ ಸಮಾವೇಶ ಹಾಗೂ 2A ಸಲಾತಿಗಾಗಿ ಡಿಸೆಂಬರ್ 10 ರಂದು ಬೆಳಗಾವಿ ಸುವರ್ಣಸೌಧ ಮುತ್ತಿಗೆ ಪೂರ್ವಭಾವಿ ಸಭೆ ಕಾರ್ಯಕ್ರಮದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಕೇಂದ್ರದ ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪಂಚಮಸಾಲಿ ಸಮಾಜವನ್ನು ಸಂಘಟನೆ ಮಾಡಲು ಇವರಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ ಸಮಾಜದ ಬಹುದಿನಗಳ ಬೇಡಿಕೆಯಾಗಿದ್ದ 2A ಮೀಸಲಾತಿ ಪಡೆಯಲು ಸಹಾಯಕವಾಗುವಂತೆ ಸಮಾಜದ ಒಳಿತಿಗಾಗಿ, ಸಂಘಟನೆಗಾಗಿ ಕೆಲಸ ಮಾಡಲು ಇವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಬೆಳಗಾವಿ ಜಿಲ್ಲಾ ಪಂಚಮಸಾಲಿ ಕಾರ್ಯಧ್ಯಕ್ಷರಾಗಿ ಹಾಗೂ ಅಥಣಿ ತಾಲೂಕ ಪಂಚಮಸಾಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಇವರ ಸಂಘಟನಾ ಕ್ರಿಯಾಶೀಲತೆಯನ್ನು ನೋಡಿ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಶ್ರೀ ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಗುಂಡು ಪಾಟೀಲ, ಸಮಾಜದ ಹಿರಿಯ ಮುಖಂಡ ಮುತ್ತಣ್ಣ ಸಂತಿ, ವಕೀಲರ ಪರಿಷತ್ ಜಿಲ್ಲಾ ಸಂಚಾಲಕ ಸುಭಾಷ ನಾಯಿಕ, ಅಶೋಕ್ ಹರಗಾಪುರ, ಚಿದಾನಂದ್, ಕಪಲಿ, ನಿಂಗಪ್ಪ ಫಿರೋಜ್, ಯಸ್ ಎಂ ರುದ್ರಗೌಡ್ರು, ಸುಧಾಕರ್ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.