ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಾತ್ಸಲ್ಯ ಮನೆ ಹಸ್ತಾಂತರ

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ಚಂದ್ರಪ್ಪನವರ ಬಡತನವ ಕಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ಮನೆಯನ್ನು ನಿರ್ಮಿಸಿ, ಮನೆಯನ್ನು ಹಸ್ತಾಂತರ ಮಾಡಲಾಯಿತು.


ತಾಲೂಕು ಯೋಜನಾಧಿಕಾರಿ ಬಸವರಾಜ ರವರು ಮನೆ ಹಸ್ತಾಂತರಿಸಿ ಮಾತನಾಡಿ ಅತಿ ಬಡವರಾದ ಕಾಶಮ್ಮ ತಾಯಿಯವರಿಗೆ ನಮ್ಮ ಯೋಜನೆ ವತಿಯಿಂದ ಮನೆ ನಿರ್ಮಾಣ ಮಾಡಿ, ಅವರ ಕನಸಿನ ಸೂರು ಕಟ್ಟಿಕೊಡುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇವೆ. ಬಡವರ ಪರವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಕಾಲ ಇದೆ. ಈ ನಿಟ್ಟಿನಲ್ಲಿ ಬಡವರ ನೊಂದವರ ಪರವಾಗಿ ನಿಸ್ವಾರ್ಥ ಸೇವೆಯನ್ನು ಈ ಯೋಜನೆಯಿಂದ ನಿರಂತರವಾಗಿ ಮಾಡುತ್ತೇವೆ ಎಂದು ತಿಳಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ಸಾಹಿತಿ ಸಂಗಮೇಶ ಎನ್ ಜವಾದಿ ಮಾತನಾಡಿ ಕಡು ಬಡತನದಲ್ಲಿ ವಾಸುಸುತ್ತಿರುವ ಅನೇಕ ಬಡವರಿಗೆ ಧರ್ಮಸ್ಥಳ ಸಂಸ್ಥೆ ವತಿಯಿಂದ ಸಹಾಯಸ್ತ ಮಾಡುತ್ತಿದ್ದಾರೆ. ಧರ್ಮಸ್ಥಳ ಸಂಸ್ಥೆ ಎಂಬುದು ಒಂದು ಸಾಮಾಜಿಕ ಸಂಸ್ಥೆಯಾಗಿ ತನ್ನದೇ ಆದಂತ ನಿಸ್ವಾರ್ಥ ಸೇವೆಯಲ್ಲಿ ತೊಡೆಸಿಕೊಂಡಿದೆ. ನಾಡಿನ ಅಭಿವೃದ್ಧಿಯಲ್ಲಿ ತನ್ನದೇ ಆದ ವಿಶಿಷ್ಟ ಪಾತ್ರ ವಹಿಸಿ ಕೆಲಸ ಮಾಡುತ್ತಿದೆ. ದೇಶದ ಹೆಮ್ಮೆಯ ಯೋಜನೆಯಂದು ಖ್ಯಾತಿ ಸಹ ಗಳಿಸಿದೆ. ತಾಲೂಕಿನ ಅಭಿವೃದ್ಧಿಗಾಗಿ ಟೊಂಕಕಟ್ಟಿಕೊಂಡು ಈ ಯೋಜನೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಬಡವರ ಪರವಾಗಿ ಈ ಸಂಸ್ಥೆ ಕೆಲಸ ಮಾಡುತ್ತಿರುವುದು ನಮಗೆಲ್ಲರಿಗೂ ನೆಮ್ಮದಿ ಮತ್ತು ಸಂತೋಷ ತಂದಿದೆ ಎಂದು ತಿಳಿಸಿದರು.
ಜನಜಾಗೃತಿ ವೇದಿಕೆ ಸದಸ್ಯರಾದ ನರಸಪ್ಪ ಪತ್ಮಾಪೂರ, ಅಸ್ಲಾಂಮಿಯಾ ಆಜಾಮ್ ಸ್ವೀಟ್ ಹೌಸ್ ಹಾಜರಿದ್ದರು.
ಸಮನ್ವಯಾಧಿಕಾರಿ ಶೋಭಾ ಅವರು ನಿರೂಪಿಸಿ, ವಂದಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಜಪ್ಪಾ ಭೋಸಗಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಗ್ರಾಮದ ಹಿರಿಯರು, ಗಣ್ಯರು, ಮಾತೆಯರು,
ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ