ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಯಾ ರಾಜ್ಯದ ಭಾಷೆಯನ್ನೇ ಶಿಕ್ಷಣ ಮಾಧ್ಯಮವಾಗಿ ಮಾಡಬೇಕಿದೆ : ಅಲ್ಲಮಪ್ರಭು ಬೆಟ್ಟದೂರು

ಕೊಪ್ಪಳ: ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು.

ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜಿನಲ್ಲಿ ಗುರುವಾರದಂದು ಕಾಲೇಜಿನ ಕನ್ನಡ ವಿಭಾಗ ಆಯೋಜನೆ ಮಾಡಿದ್ದ ‘ಕನ್ನಡ ಕ್ರಿಯಾ ವೇದಿಕೆ’ ವಿದ್ಯಾರ್ಥಿ ಘಟಕ ಉದ್ಘಾಟನೆ ಮತ್ತು ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿ ಮಾತೃಭಾಷೆ ಶಿಕ್ಷಣ ಬಲಶಾಲಿಯಾದದ್ದು. ಅದರಲ್ಲೇ ಮಕ್ಕಳು ಕಲಿತರೆ ವಿಷಯ ಚೆನ್ನಾಗಿ ಅರ್ಥವಾಗುತ್ತದೆ. ಹಾಗಾಗಿ ಎಲ್ಲಾ ರಾಜ್ಯಗಳು ಈ ದಿಶೆಯಲ್ಲಿ ಆಲೋಚಿಸುವ ಅಗತ್ಯವಿದೆ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಮನಸ್ಸು ಕೊಟ್ಟು ಓದಬೇಕು. ಓದಿದ್ದು ಮನನವಾದರೆ ಅವರ ಭವಿಷ್ಯ ಚೆನ್ನಾಗಿ ಇರಬಲ್ಲುದು.
ಕಲೆ, ಸಾಹಿತ್ಯ ಮತ್ತು ಸಂಗೀತ ಇಲ್ಲದೇ ಇರುವ ನಮ್ಮ ಮನಸ್ಸು ಜಡವಾಗಿರುತ್ತದೆ,ಸಾವಿತ್ರಿ ಬಾ ಪುಲೆ ಯವರು ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಶಿಕ್ಷಣ ಕೊಟ್ಟಿದ್ದಾರೆ. ಈ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳಿಗೆ ಸುಲಭವಾಗಿ ಶಿಕ್ಷಣ ದೊರೆತಿಲ್ಲ. ಭಾರತದ ಎಲ್ಲಾ ಭಾಷೆಗಳು ನಶಿಸುತ್ತಿವೆ. ಜಾಗತೀಕರಣದಿಂದ ಇಂಗ್ಲಿಷ್ ಭಾಷೆಗೆ ಹೆಚ್ಚು ಮನ್ನಣೆ ಬಂದಿದೆ. ಭಾರತದ ಎಲ್ಲಾ ಭಾಷೆಗಳು ಇಂಗ್ಲಿಷ್ ನಿಂದ ಕಷ್ಟ ಅನುಭವಿಸುತ್ತಿವೆ ಕನ್ನಡ ಭಾಷೆ ಬಹಳ ಪ್ರಾಚಿನವಾದ ಭಾಷೆ ಕನ್ನಡ ವೈಚಾರಿಕತೆ ಭಾಷೆ, ಕನ್ನಡ ವಿಜ್ಞಾನ ಭಾಷೆ. ಇದು ದಕ್ಷಿಣ ಭಾರತದ ದ್ರಾವಿಡ ಭಾಷೆಗಳಲ್ಲಿ ಒಂದು. ಕನ್ನಡಿಗರು ವಿವಿಧ ಕ್ಷೆತ್ರಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಹೆಚ್ಚಾಗಿ ಪುಸ್ತಕಗಳನ್ನು ಓದಬೇಕು. ನಾವೆಲ್ಲರೂ ದೇಶೀ ಬಾಷೆಗಳನ್ನು ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿಕ್ಷಣ ಪ್ರೇಮಿ ಬಿ. ಜಿ ಕರಿಗಾರ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಕುವೆಂಪು, ಬೇಂದ್ರೆ ಇನ್ನಿತರ ಸಾಹಿತಿಗಳ ಪುಸ್ತಕಗಳನ್ನು ಓದಬೇಕು. ನಮ್ಮ ಹಿರಿಯರ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಉದಯವವಾಗಿದೆ. ಕನ್ನಡ ಮಾದ್ಯಮದಲ್ಲಿ ಓದಿದವರು ಉನ್ನತ ಹುದ್ದೆಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಮಾತನಾಡುತ್ತ ನಾವು ಸೇವಿಸುವ ಗಾಳಿ ಮತ್ತು ತಿನ್ನುವ ಅನ್ನದ ಭಾಷೆಯಾದ ಕನ್ನಡವನ್ನು ನಾವು ಮರೆಯಬಾರದು. ಕನ್ನಡವನ್ನು ಪ್ರೀತಿಸಬೇಕು. ಕನ್ನಡ ಭಾಷೆಯನ್ನು ಬೆಳೆಸಬೇಕು. ಸಾಹಿತ್ಯವು ಸಮಾಜದ ಕನ್ನಡಿಯಾಗಿದೆ. ಸಾಹಿತ್ಯದ ಮೂಲಕ ಸಮಾಜ ಸೇವೆ ಮಾಡಬೇಕು ಎಂದು ತಿಳಿಸಿದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಹುಲಿಗೆಮ್ಮ ನಾವು ವರ್ಷವಿಡೀ ಕನ್ನಡ
ಕಾರ್ಯಕ್ರಮಗಳನ್ನು ಮಾಡಬೇಕು. ಕನ್ನಡದ ಕ್ರಿಯಾಶೀಲತೆಗೆ ನಾವು ಹೆಚ್ಚು ಒತ್ತು ಕೊಡಬೇಕು. ನಾವು ಎಲ್ಲ ಭಾಷೆಗಳನ್ನು ಪ್ರೀತಿಸೋಣ. ಕನ್ನಡ ಬಾಷೆ ಕುರಿತು ಹೆಚ್ಚು ಅಭಿಮಾನ ಇಟ್ಟುಕೊಳ್ಳೋಣ ಎಂದು ತಿಳಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಪ್ರದೀಪ್ ಕುಮಾರ್, ಡಾ. ನರಸಿಂಹ, ಡಾ. ಅಶೋಕ ಕುಮಾರ್,ಸುಮಿತ್ರ, ಶುಭ, ಶಿವ ಪ್ರಸಾದ್ ಹಾದಿಮನಿ, ಡಾ. ಮಂಜಪ್ಪ, ಡಾ. ಸೂರಪ್ಪ, ವಿರೂಪಾಕ್ಷಪ್ಪ, ಮುತ್ತಾಳ ಹಾಗೂ ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾವೇರಿ, ನೇತ್ರ ಮತ್ತು ಸಬಿಹಾ ಪ್ರಾರ್ಥನೆ ಗೀತೆ ಹಾಡಿದರು. ಗೀತಾ ಬಜೇಂತ್ರಿ ಸ್ವಾಗತಿಸಿದರು.. ಗಂಗಮ್ಮ ವಂದಿಸಿದರು, ಭೂಮಿಕಾ ಹೂಗಾರ ನಿರೂಪಣೆ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ