ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ನರಸಿಂಹಗಿರಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್ ) ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 29-11-2024 ರಂದು ಉದ್ಘಾಟಿಸಿದ ಬಳಿಕ ಮಾತನಾಡಿದರು ಸದೃಢ ಭಾರತ ನಿರ್ಮಾಣಕ್ಕಾಗಿ ಯುವಕರ ಪಾತ್ರ ಮುಖ್ಯವಾಗಬೇಕು, ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯ ಪ್ರಜ್ಞೆಯಿಂದ ಓದಿ ಸಾಧನೆ ಹಾದಿಯಲ್ಲಿ ಸಾಗಬೇಕು. ಯುವಕರು ದೇಶದ ಭವಿಷ್ಯತ್ತಿನ ಪ್ರಜೆಗಳಾಗಿ ಬಾಳಿಬದುಕಬೇಕಾಗಿರುವುದರಿಂದ ದುಶ್ಚಟಗಳಿಗೆ ಬಲಿಯಾಗದೇ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಹಳ್ಳಿಗಳಿಂದಲೇ ಶ್ರಮದಾನಕ್ಕೆ ಆಧ್ಯತೆ ಕೊಟ್ಟು, ಸ್ವಚ್ಛತೆಗೆ ಕಡೆ ಗಮನ ಹರಿಸಿ, ಸದೃಢ ಭಾರತದ ನಿರ್ಮಾಣಕ್ಕಾಗಿ ಪಾತ್ರರಾಗಬೇಕು ಎಂಬ ಕಿವಿಮಾತು ಹೇಳಿದರು.
ಇದೇ ವೇಳೆ ನಮ್ಮಲ್ಲಿ ಬೆಂಕಿಯ ಅವಘಡ ಸಂಭವಿಸಿದಾಗ ಅಗ್ನಿಶಾಮಕ ಠಾಣೆಯಿಂದ ತಮ್ಮನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂದೂ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು, ನ ಪ್ರಾಂಶುಪಾಲರಾದ ಡಾ. ಕೊತ್ಲಮ್ಮ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಸುಮಾ ಗಣೇಶ, ಉಪನ್ಯಾಸಕರು, ವಿದ್ಯಾರ್ಥಿಗಳು, ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು, ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
