ಶಿವಮೊಗ್ಗ : 2024-25ನೇ ಸಾಲಿನ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ. 03 ರಂದು ಬೆಳಗ್ಗೆ 9.30 ರಿಂದ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ, ಶಿವಮೊಗ್ಗ ಇಲ್ಲಿ ಶಿವಮೊಗ್ಗ ತಾಲೂಕು ವಿಶೇಷ ಅಗತ್ಯವುಳ್ಳ ಮಕ್ಕಳಿಗೆ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಲು ಸಂಬಂಧಿಸಿದ ಮುಖ್ಯ ಶಿಕ್ಷಕರು/ಪೋಷಕರು ಸಹಕರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ : ಕೊಡಕ್ಕಲ್ ಶಿವಪ್ರಸಾದ್ ಶಿವಮೊಗ್ಗ
