ಶಿವಮೊಗ್ಗ : ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಶಿಕ್ಷಣ ಮತ್ತು ಸಾಕ್ಷರತೆ ಖಾತೆ ಸಚಿವರು ಶ್ರೀ ಮಧುಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮಲೆನಾಡು ಪ್ರದೇಶಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ ಅವರು ಸುಧೀರ್ಘವಾಗಿ ವಿವರಿಸಿ ಮಾತಾಡಿದರು.
ವಿನಾ ಕಾರಣ ರೈತರಿಗೆ ತೊಂದರೆ ನೀಡಬೇಡಿ ಎಂದು ಡಿಎಫ್ಒ ಅವರಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿ ಪ್ರದೇಶ ಅಭಿವೃದ್ಧಿಯ ಬಗೆಗಿನ ಕಾಳಜಿಯನ್ನು ಒತ್ತಿ ಹೇಳಿದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
