ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಇಂಡಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಛೇರಿಯ ಉದ್ಘಾಟನಾ ಹಾಗೂ ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಸಮಾರಂಭ ಕಾರ್ಯಕ್ರಮ ಇಂಡಿ ನಗರದ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧ ಆವರಣದ ಮುಂಭಾಗದಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಇಂಡಿ ಮತ ಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ ನಂತರ ಮಾತನಾಡಿದ ಅವರು ನಮ್ಮ ಕಾಂಗ್ರೆಸ್ ಪಕ್ಷ 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸುವಲ್ಲಿ ಯಶಸ್ವಿಯಾಗಿದೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದರು.
ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ ಎಂದಿದ್ದರು. ಈ ಎಲ್ಲಾ ಯೋಜನೆಗಳಿಗೆ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ ಅನುದಾನ ಕ್ರೋಢೀಕರಣವನ್ನೂ ಆಯವ್ಯಯದಲ್ಲಿ ವಿವರಿಸಲಾಗಿದೆ. ಈ ಕಾರ್ಯಕ್ರಮಗಳಿಗೆ ವಾರ್ಷಿಕ ಅಂದಾಜು ಒಟ್ಟು 58068 ಕೋಟಿ ರೂ.ಗಳು ಅಗತ್ಯವಿದೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 4-5 ಸಾವಿರ ರೂಪಾಯಿಗಳು ದೊರೆಯುತ್ತದೆ ಎಂದರೂ ತಪ್ಪಾಗಲಾರದು ಎಂದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಶಾಂತ್ ಕಾಳೆ, ಇಲಿಯಾಸ್ ಬೊರಾಮಣಿ ಎಂ ಆರ್ ಪಾಟೀಲ್ ಸೇರಿದಂತೆ ಅನೇಕರು ಮಾತನಾಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಇಂಡಿ ತಶೀಲದಾರ ಎಸ್ ಬಿ ಕಡಕಬಾವಿ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ರಾಠೋಡ ಬಿ ಕೆ ಪಾಟೀಲ್ ಜಾವೀದ್ ಮೋಮಿನ್ ಬೀಮು ಕೌಲಗಿ, ಮಲ್ಲು ಬೋಸಗಿ ಬೀಮಾಶಂಕರ ಹಂಜಗಿ ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿ ಗೀತಾ ಎಸ್ ಗುತ್ತರಗಿಮಠ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ. ಅರವಿಂದ್ ಕಾಂಬಳೆ ಇಂಡಿ
