ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು : ಸಂಜು ಬಡಿಗೇರ

ಬೆಳಗಾವಿ/ ಚಿಕ್ಕೋಡಿ: ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಮಹಾ ಸ್ವಾಮೀಜಿಯವರು ಹೇಳಿದರು.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ದಶಕಗಳಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಹೋರಾಟಗಳನ್ನು, ಸತ್ಯಾಗ್ರಹಗಳನ್ನು, ಧರಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದೇವೆ‌. ಆದರೂ ಸಹ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕನಸು ಈಡೇರುತ್ತಿಲ್ಲ ಚಿಕ್ಕೋಡಿ ಭಾಗದ ಶಾಸಕರು ಜಿಲ್ಲೆಯ ಕುರಿತು ಒಗ್ಗಟ್ಟು ತೋರುತ್ತಿಲ್ಲ ಜಿಲ್ಲೆಗಾಗಿ ಶಾಸಕರು ಒಗ್ಗಟ್ಟು ತೋರಿಸಿದರೆ ಜಿಲ್ಲೆಯಾಗಲು ಸಾಧ್ಯ ಎಂದರು.
ದೂರದ ಅಥಣಿಯಿಂದ ಜನರು ಯಾವುದೇ ಕೆಲಸಕ್ಕೆ ಅಂತ ಜಿಲ್ಲಾಧಿಕಾರಿಗಳ ಕಚೇರಿಗೆ ಹೋದಾಗ ಹೋಗಿಬರಲು ಎರಡು ದಿನಗಳು ಬೇಕಾಗುತ್ತದೆ.
ಈ ನಿಟ್ಟಿನಲ್ಲಿ ಚಿಕ್ಕೋಡಿ ಜಿಲ್ಲೆ ಮಾಡಿದರೆ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾದ ಸಂಜು ಬಡಿಗೇರ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟವನ್ನು ಮಾಡಿಕೊಂಡು ಬರುತ್ತಿದ್ದೇವೆ. ಈ ಬಾರಿ ಅಧಿವೇಶನದ ಒಳಗಾಗಿ ಚಿಕ್ಕೋಡಿ ಜಿಲ್ಲೆಯನ್ನು ಘೋಷಿಸುತ್ತಿದ್ದರೆ, ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯಕ್ಕಾಗಿ ಘೋಷಣೆ ಕೂಗಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ ಸದ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುತ್ತಾರೆ ಎಂಬ ಭರವಸೆ ಇದೆ. ಒಂದು ವೇಳೆ ಭರವಸೆ ಈಡೇರದಿದ್ದರೆ ಉಗ್ರವಾದ ಹೋರಾಟವನ್ನು ಮಾಡಲಾಗುವುದು ಎಂದರು.

ಈ ಸಂಧರ್ಭದಲ್ಲಿ ಉಪಾಧ್ಯಕ್ಷ ಪ್ರತಾಪಗೌಡ ಪಾಟೀಲ, ಸಂತೋಷ ಪೂಜೇರಿ, ಬಸವರಾಜ ಮಗದುಮ್, ಸಚಿನ್ ದೊಡ್ಡಮನಿ, ಮಂಜುನಾಥ ಬಾನೂಸೆ, ಅಮೂಲ ನಾವಿ, ಸುದರ್ಶನ ತಮ್ಮಣ್ಣವರ, ಕಾಡಗೌಡ ಪಾಟೀಲ, ಮೋಹನ ಪಾಟೀಲ, ಬೀರು ವಗ್ಗೆ, ಸೌರಭ ಹಿರೇಮಠ, ರಮೇಶ ಡಂಗೇರ, ಮಾಳು ಕರೆಣ್ಣವರ, ರುದ್ರಯ್ಯಾ ಹಿರೇಮಠ, ರಫೀಕ ಪಠಾಣ ಹಾಗೂ ಹಲವಾರು ಹೋರಾಟಗಾರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ