ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ 2023ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7 ರಂದು ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ವರದಿ- ಮುಜೀಬ್ ಅಫಜಲಪುರ
