ರಾಜ್ಯದ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ನಿರ್ಭಯವಾಗಿ ವ್ಯಾಸಂಗ ಮಾಡಲು ಪೂರಕವಾದ ವಾತಾವರಣವನ್ನು ನಿರ್ಮಿಸಲು ಮನವಿ
ಬೆಂಗಳೂರು : ರಾಜ್ಯಾದ್ಯಂತ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಯುವಕರು ಹಳ್ಳಿಯಿಂದ ಪಟ್ಟಣಗಳವರೆಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಅದರಲ್ಲಿಯೂ ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡದಂತಹ ಮಹಾನಗರಗಳಲ್ಲಿ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಹಲವಾರು ಭಿನ್ನ ರೀತಿಯ ಸವಾಲುಗಳನ್ನು ಎದುರಿಸುತ್ತಿದ್ದಾರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸಂದರ್ಭದಲ್ಲಿ ಸಮಾಜಘಾತಕ ದುಷ್ಟ ಶಕ್ತಿಗಳ ಹಿಡಿತಕ್ಕೆ ಸಿಲುಕುತ್ತಿರುವುದು ಕಂಡು ಬರುತ್ತಿದೆ ಅಂತಹ ದುಷ್ಟ ಹಿತಾಸಕ್ತಿಗಳು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶದ್ರೋಹಂತಹ ಕೆಲಸಗಳನ್ನು ಮಾಡುತ್ತಿವೆ ಹಲವು ಕಾಲೇಜುಗಳಲ್ಲಿ ಡ್ರಗ್ಸ್, ಗಾಂಜಾ, ಅಫೀಮು ಸೇರಿದಂತೆ ಹಲವು ಮಾದಕ ವಸ್ತುಗಳನ್ನು ಮಾರಾಟ ಮಾಡಿ ವಿದ್ಯಾರ್ಥಿಗಳ ಜೀವನವನ್ನು ಹಾಳು ಮಾಡುತ್ತಿದ್ದಾರೆ ಅದರಲ್ಲಿ ಬಡ ವಿದ್ಯಾರ್ಥಿಗಳು ಹಣದ ಆಸೆಗೆ ಬಲಿಯಾಗುತ್ತಿದ್ದಾರೆ ಕೆಲವು ವಿದ್ಯಾರ್ಥಿಗಳನ್ನು ಹೆದರಿಸಿ ಈ ಕೆಲಸಗಳನ್ನು ಮಾಡಿಸುತ್ತಿದ್ದಾರೆ ಈ ಕೃತ್ಯಗಳಲ್ಲಿ ಭಾಗವಹಿಸಲು ಒಳ್ಳೆಯ ಅಮಾಯಕ ವಿದ್ಯಾರ್ಥಿಗಳನ್ನು ಈ ಧಂಧೆಗೆ ದೂಡುತ್ತಿದ್ದಾರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳ ಸಾಮಾಜಿಕ ಹಿನ್ನೆಲೆ ಭಿನ್ನವಾಗಿದ್ದು ಅವರಲ್ಲಿ ಸಮುದಾಯಕ ಭಾವನೆ ಮೂಡಿಸುವುದು ಸವಲಾಗಿರುತ್ತದೆ ಶಾಲಾ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು ಅದನ್ನು ತೋರಿಸಿ ಎದುರಿಸುವುದು ಅವರನ್ನು ಶಾರೀರಿಕವಾಗಿ ಬಳಸಿಕೊಳ್ಳುವುದು ಸಾಮಾನ್ಯವಾಗಿದೆ ಈ ವಿಷಯಗಳನ್ನು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿಯಲ್ಲಿ ಹಾಗೂ ತಮ್ಮ ಸ್ನೇಹಿತರ ಬಳಿಯಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಹತ್ತಿರ ಮುಕ್ತವಾಗಿ ಹೇಳಿಕೊಳ್ಳಲು ಸಾಧ್ಯವಾಗದೆ ಕುಗ್ಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ ಪೋಷಕರಲ್ಲಿ ಹೇಳಿಕೊಂಡರೂ ಸಹ ಸಾಮಾಜಿಕವಾಗಿ ಗೌರವಕ್ಕೆ ಹಾಗೂ ವಿದ್ಯಾಭ್ಯಾಸ ಮೊಟುಕಾಗುತ್ತದೆ ಎಂಬ ಆತಂಕದಿಂದ ಪೊಲೀಸ್ ಸಹಾಯ ಪಡೆಯಲು ವಿಫಲರಾಗುತ್ತಿದ್ದಾರೆ ಇಂತಹ ವಿದ್ಯಾರ್ಥಿಗಳ ಅಸಹಾಯಕ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಸಮಾಜಘಾತಕ ಶಕ್ತಿಗಳು ಹಲವು ರೀತಿಯ ಅನಾಹುತಗಳಿಗೆ ಕಾರಣವಾಗಿವೆ ಉದಾಹರಣೆಗೆ ವಿದ್ಯಾರ್ಥಿಯರ ಮೇಲೆ ಹಲ್ಲೆ ನಡೆಸುವುದು ಕೊಲೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಸರ್ವೇಸಾಮಾನ್ಯವಾಗಿದೆ
ಆದ್ದರಿಂದ ಶಾಲಾ-ಕಾಲೇಜುಗಳ ಸಮೀಪವಿರುವ ಪೊಲೀಸ್ ಅಧಿಕಾರಿಗಳು ಪ್ರತಿ ತಿಂಗಳು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಸ್ನೇಹ ಪೂರ್ವಕವಾಗಿ ಸ್ಪಂದಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸಬಹುದಾಗಿದೆ ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ಮಹಿಳಾ ಉಪನ್ಯಾಸಕರು ಹಾಗೂ ಪೊಲೀಸ್ ಅಧಿಕಾರಿಗಳ ಸಹಯೋಗದಲ್ಲಿ ಪ್ರತಿ ತಿಂಗಳು ಸಭೆ ಕರೆದು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅವರಿಗೆ ಏನಾದರೂ ತೊಂದರೆಗಳು ಹೆದರಿಕೆಗಳು ಮುಂತಾದ ಸಮಸ್ಯೆಗಳು ಇದ್ದಲ್ಲಿ ಚರ್ಚಿಸಲು ಮುಕ್ತ ಅವಕಾಶವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಟ್ಟು ಎದುರಾಗಬಹುದಾದ ದುರ್ಘಟನೆಗಳನ್ನು ತಡೆಯಲು ಮುಂಜಾಗ್ರತವಾಗಿ ಕ್ರಮ ಕೈಗೊಳ್ಳುವುದು ಉಚಿತವಾಗಿರುತ್ತದೆ ಇದರಿಂದ ಶಾಲಾ ಕಾಲೇಜುಗಳಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣವಾಗಿ ಪೋಷಕರ ಆತಂಕ ನಿವಾರಣೆಯಾಗಿ ಪೋಲಿಸ್ ಇಲಾಖೆಗೆ ಒಳ್ಳೆಯ ಹೆಸರು ಸಹ ಬರುತ್ತದೆ
ಆದ್ದರಿಂದ ತಾವುಗಳು ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಮಾನ್ಯ ಗೃಹ ಸಚಿವರು ಹಾಗೂ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಪತ್ರ ಸಲ್ಲಿಸಿದ್ದು ಮುಂದಿನ ದಿನಗಳಲ್ಲಿ ಸರ್ಕಾರ ಈ ವಿಷಯ ಕುರಿತು ಕ್ರಮ ಕೈಗೊಳ್ಳದೆ ಇದ್ದಲ್ಲಿ ರಾಜ್ಯಾದ್ಯಂತ ಹೋರಾಟ ಕೈಗೊಳ್ಳುಲಾಗುವುದು ಎಂದು ಶ್ರೀ ಬಿ.ಟಿ ಜೀವನ್ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರು ಅಖಿಲ ಕರ್ನಾಟಕ ವಿದ್ಯಾರ್ಥಿ ಯುವ ಸಂಘಟನೆ (ರಿ.) ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-ಕರುನಾಡ ಕಂದ
