ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಹಿತಿ , ಕನ್ನಡಪರ ಚಿಂತಕಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಧಾರವಾಡದ ಚೇತನ ಫೌಂಡೇಶನ್ ಹಾಗೂ ಧಾರವಾಡ ಕಲಾವಿದರ ವೇದಿಕೆ ನೀಡುವ ಸುವರ್ಣ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ಅಧ್ಯಕ್ಷರಾಗಿ 354 ಸಾಹಿತ್ಯ ಕಾರ್ಯಕ್ರಮಗಳ ಸಂಘಟನೆ , ಉದಯೋನ್ಮುಖ ಬರಹಗಾರರ 303 ಸಾಹಿತ್ಯ ಕೃತಿಗಳ ಪ್ರಕಟಣೆ, ಸಾಮೂಹಿಕ ನೇತ್ರದಾನ ಕಾರ್ಯಕ್ರಮದ ಮೂಲಕ ನೇತ್ರದಾನ ಮಾಡಲು ಎಂಟು ಸಾವಿರಕ್ಕೂ ಹೆಚ್ಚು ಜನರ ಮನ ಒಲಿಸುವಿಕೆ , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಸಸಿಗಳ ಉಚಿತ ವಿತರಣೆ ಈ ಸಾಧನೆಗಳನ್ನು ಪರಿಗಣಿಸಿ ಸುವರ್ಣ ಮಹೋತ್ಸವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕನ್ನಡ ಭಾಷೆ ಬಳಸದ ಐದು ನೂರಕ್ಕೂ ಹೆಚ್ಚು ಅನ್ಯ ಭಾಷಾ ಫಲಕಗಳ ಬಗ್ಗೆ ದೂರು ಸಲ್ಲಿಕೆ, ಕನ್ನಡ ಭಾಷೆ ಬಳಸದ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ದೂರು , ಐದು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಕನ್ನಡ ನಾಡು – ನುಡಿಯ ಮಹತ್ವ ಕುರಿತು ಉಪನ್ಯಾಸ ,ಆಯ್ದ ಶಾಲಾ ಕಾಲೇಜುಗಳಿಗೆ ಜ್ಞಾನ ಪೀಠ ಪ್ರಶಸ್ತಿ ವಿಜೇತ ಕನ್ನಡ ಭಾವ ಚಿತ್ರಗಳ ನೀಡಿಕೆ ಮಾಡುವ ಮೂಲಕ ಸಾಹಿತಿ ಭೇರ್ಯ ರಾಮಕುಮಾರ್ ಸುವರ್ಣ ಕರ್ನಾಟಕಕ್ಕೆ ತಮ್ಮದೇ ಅದ ಮಹತ್ವದ ಕೊಡುಗೆ ನೀಡಿದ್ದಾರೆ.ಈ ಕೊಡುಗೆಗಳನ್ನು ಪರಿಗಣಿಸಿ ಭೇರ್ಯ ರಾಮಕುಮಾರ್ ಅವರನ್ನು ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಚೇತನ ಫೌಂಡೇಶನ್ ಪ್ರಕಟಣೆ ತಿಳಿಸಿದೆ.
ಇವರ ಕನ್ನಡ ನಾಡು ನುಡಿ ಸೇವೆಯನ್ನು ಗುರುತಿಸಿ 2022 ರ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2023 ರಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿದೆ.
ಮುಂಬರುವ ಡಿಸೆಂಬರ್ 15 ರಂದು ಧಾರವಾಡದಲ್ಲಿ ನಡೆಯುವ ಸುವರ್ಣ ಮಹೋತ್ಸವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಗುವುದು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ