ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರ್‌ಡಿಪಿಆರ್‌ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಗ್ರಾಮಪಂಚಾಯಿತಿಗಳ ಘನತ್ಯಾಜ್ಯ ವಿಲೇವಾರಿ ಘಟಕದ ಬಗ್ಗೆ ಡಿ.ಎಸ್‌. ಅರುಣ್‌ರವರ ಸಲಹೆ

ಬೆಳಗಾವಿ : ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆರ್‌ಡಿಪಿಆರ್‌ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟ ಹೋರಾಟ ಕೈಗೊಂಡ ಕುರಿತು ವಿಧಾನಪರಿಷತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಾನ್ಯ ವಿಧಾನಪರಿಷತ್ತಿನ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ.ಎಸ್‌.ಅರುಣ್‌ರವರು ಇಲಾಖಾ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆರವರ ಬಳಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿ ವಿಷಯ ಪ್ರಸ್ತಾಪಿಸಿದರು.

ಗ್ರಾಮಪಂಚಾಯಿತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮದ ಅಂಶಗಳು ಅನುಷ್ಠಾನವಾಗಬೇಕು ಹಾಗೂ
ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ ಕುರಿತು ಮಾನ್ಯ ಸದಸ್ಯರು ಇಲಾಖೆಯ ಸಚಿವರ ಬಳಿ ವಿಷಯ ಪ್ರಸ್ತಾಪಸಿದಾಗ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮುಂದುವರೆದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರು ಮಾತನಾಡುತ್ತಾ, ಒಕ್ಕೂಟದವರ ಬೇಡಿಕೆಗಳ ಬಗ್ಗೆ ಈಗಾಗಲೇ ಚರ್ಚಿಸಿದ್ದು, ಕಾನೂನು ಚೌಕಟ್ಟಿನ ವ್ಯಾಪ್ತಿಯೊಳಗೆ ಅರ್ಥಿಕ ಪರಿಣಾಮಗಳನ್ನು ಪರಿಗಣಿಸಿ ಮುಂದಿನ ಎರಡು ತಿಂಗಳ ಕಾಲಾವದಿಯೊಳಗೆ ಈಡೇರಿಸಬಹುದಾದ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.

ಘನತ್ಯಾಜ್ಯ ವಿಲೇವಾರಿ ಘಟಕ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಆಶಯ ಪೂರ್ಣ ಪ್ರಮಾಣವಾಗಿ ಈಡೇರಬೇಕು ಎಂದು ಮಾನ್ಯ ಸದಸ್ಯರು ತಿಳಿಸಿದರು.

ರಾಜ್ಯದ 5950 ಗ್ರಾಮ ಪಂಚಾಯತಿಗಳಿರುವುದರಿಂದ ಅಂದಾಜು 3500 ಗ್ರಾಮ ಪಂಚಾಯತಿಗಳು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಒಳಗೊಂಡಿವೆ. ಚಾಲ್ತಿಯಲ್ಲಿರಿವ ಘನತ್ಯಾಜ್ಯ ವಿಲೇವಾರಿ ಘಟಕದ ಪ್ರಕ್ರಿಯೆಯಲ್ಲಿ ಸ್ವಯಂ ಸಮರ್ಥನೀಯವಾಗಿ ನಡೆಸಲು ಪೂರ್ಣಪ್ರಮಾಣದಲ್ಲಿ ಸಾಧ್ಯವಾಗುವುತಿಲ್ಲ, ಘನತ್ಯಾಜ್ಯವಿಲೇವಾರಿ ಕೆಲಸದ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಆಟೋ ಚಾಲಕರಿಗೆ ಸಂಬಳ ಹಾಗೂ ಮುಂತಾದ ಖರ್ಚು ವೆಚ್ಚಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಎನ್ ಆರ್ ಇ ಜಿ ಎ ಯೋಜನೆಯಡಿ ಸದರಿ ಪ್ರಕ್ರಿಯೆಯನ್ನು ಪರಿಗಣಿಸಬೇಕು,ನಾವು ರಾಜ್ಯದಿಂದ ಪ್ರಸ್ತಾವನೆಯನ್ನು ಕಳುಹಿಸಬಹುದಾದರೆ, ಸುಸ್ಥಿರತೆಯ ಪ್ರಕ್ರಿಯೆಯಲ್ಲಿ ಸುಗಮ ಹರಿವು ಇರುತ್ತದೆ ಎಂದು ಮಾನ್ಯ ಸದಸ್ಯರು ತಿಳಿಸಿದರು.

ಸಚಿವರು ಉತ್ತರಿಸುವಾಗ ಇದು ಬಹಳ ಮುಖ್ಯವಾದ ವಿಷಯವಾಗಿದೆ ಇದನ್ನು ಚರ್ಚಿಸಲಾಗುವುದು ಮತ್ತು ಪ್ರಕ್ರಿಯೆಗೆ ನೀಲಿ ನಕ್ಷೆಯನ್ನು ಸಿದ್ದಪಡಿಸಿ ಕಾರ್ಯರೂಪಕ್ಕೆ ತರಲು ಕ್ರಮ ವಹಿಸಲಾಗುವುದು ಎಂದು ಸಕಾರಾತ್ಮಕವಾಗಿ ಉತ್ತರಿಸಿದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ