ಶಿವಮೊಗ್ಗ : ಶ್ರೀಮತಿ ಅಪರ್ಣಾ ಎಮ್. ಕೊಳ್ಳಾ ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿರುವ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ “ಜೆ.ಜೆ ಕಾಯ್ದೆ-2015, ಬಾಲ್ಯ ವಿವಾಹ ನಿಷೇಧ ಕಾಯ್ದೆ- 2006, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ-2012 ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತಾಗಿ ಒಂದು ದಿನದ ಅರಿವು /ಜಾಗೃತಿ ತರಬೇತಿ ಕಾರ್ಯಕ್ರಮವನ್ನು ದಿನಾಂಕ:13-12-2024 ರಂದು “ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ” ಆಲ್ಕೊಳ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಖಾಸಗಿ ಶಾಲೆ, ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ವಸತಿ ನಿಲಯದ 120 ಮಕ್ಕಳು ಭಾಗವಹಿಸಿದ್ದು, ಜಿಲ್ಲೆಯಲ್ಲಿರುವ ಶಾಲೆ ಹಾಗೂ ವಸತಿ ಶಾಲೆಗಳಲ್ಲಿನ ಆಯ್ದ ಮಕ್ಕಳಿಂದ ಪ್ರಸ್ತುತ ದಿನಮಾನಗಳಲ್ಲಿ ಮಕ್ಕಳ ಜ್ವಲಂತ ಸಮಸ್ಯೆಗಳ ಕುರಿತು ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರು ಮಕ್ಕಳೊಂದಿಗೆ ಸಂವಾದ ನಡೆಸಿರುತ್ತಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಅಪರ್ಣಾ ಎಮ್. ಕೊಳ್ಳಾ, ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಇವರು ನೇರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಪ್ಪ ಬಿ.ಹೆಚ್. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಇವರು ವಹಿಸಿರುತ್ತಾರೆ ಮತ್ತು ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳೊಂದಿಗೆ ನೇರ ಸಂವಾದದಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಲು ನೆರವಾದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
