ಮಂಡ್ಯ : ಕೆ.ಆರ್. ಪೇಟೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಜಯಕೀರ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀ ಸತೀಶ ಜವರೇಗೌಡ ಭಾಗವಹಿಸಿದ್ದು ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಸಿ. ನಾರಾಯಣಗೌಡ ಅವರು ಆತ್ಮೀಯವಾಗಿ ಸನ್ಮಾನಿಸಿದರು.
ಟ್ರಸ್ಟ್ ಅಧ್ಯಕ್ಷರೂ ಆತ್ಮೀಯರೂ ಆದ ಡಾ. ರೇವಣ್ಣ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಅಂಚಿ ಸಣ್ಣ ಸ್ವಾಮಿಗೌಡ, ಪತ್ರಕರ್ತರಾದ ನೀಲಕಂಠಣ್ಣ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
