ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಸ್ವರ್ಗ ಸಿಗುತ್ತಿತ್ತು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದ ಅವರ ಹೇಳಿಕೆಯನ್ನು ಕಾಂಗ್ರೆಸ್ ವಿಭಾಗದ ಪರಿಶಿಷ್ಟ ಜಾತಿ ಜಿಲ್ಲಾ ಮಾಧ್ಯಮ ವಕ್ತಾರ ಅಮೃತ ಸಜ್ಜನ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ಅಧ್ಯಯನ, ಬದ್ಧತೆ ಮತ್ತು ಮಹಾಲೋಕ ದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರ ಸಂವಿಧಾನ ಎಂಬುದನ್ನು ನಾವು ಎದೆ ತಟ್ಟಿಕೊಂಡು ಹೇಳುತ್ತೇವೆ ಎಂದರು.
ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಆವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು. ಹೀಗಾಗಿ ಪುಣ್ಯ ಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ
ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಷಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.
