ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಬೇಡ್ಕರ್ ವಿರೋಧಿ ಶಾ ವಜಾಕ್ಕೆ ಒತ್ತಾಯ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ ಸಿದ್ದಲಿಂಗ ಸಿ ಕಟ್ಟಿಮನಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಸಂಘ ಪರಿವಾರವು ಮೊದಲಿನಿಂದಲೂ ಅಂಬೇಡ್ಕರ್ ವಿರೋಧಿ ಧೋರಣೆ ಅನುಸರಿಸಿಕೊಂಡು ಬಂದಿದ್ದಾರೆ. ಮತ್ತೊಮ್ಮೆ ಬಿಜೆಪಿ ನಿಜ ಬಣ್ಣದ ಜೊತೆಗೆ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಅವರು ಯಾವತ್ತೂ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ ಇಂತಹ ಮನುವಾದಿ ಮನಸ್ಥಿತಿಯ ಆಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ ಹಾಗೂ ಭಾರತದ ಸಂವಿಧಾನದ ಮೂಲತತ್ವಗಳಿಗೆ ಧಕ್ಕೆಯಾಗುತ್ತದೆ ಕೂಡಲೇ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿದರು.
ಭಾರತದ ಸಂವಿಧಾನರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಕೂಡಾ ಅಪಮಾನಗಳು ಸಂಘ ಪರಿವಾರದಿಂದ ನಡೆದಿತ್ತು ಅವರ ಮಾತುಗಳು ಆಕಸ್ಮಿಕವೇನೂ ಅಲ್ಲ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿದೆ. ಅಮಿತ್ ಪ್ರತಿನಿಧಿಸುವ ಆರ್ ಎಸ್ ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧವಾಗಿದೆ ಅವರ ಅಂಬೇಡ್ಕರ್ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್.ಎಸ್.ಎಸ್ ಬಹಿರಂಗವಾಗಿಯೇ ಹೇಳಿಕೊಂಡಿದೆ ಇಂತಹವರಿಗೆ ಚುನಾವಣೆಯ ಸಂದರ್ಭದಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ