ಬೀದರ್/ಬಸವಕಲ್ಯಾಣ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಅವಮಾನ ಖಂಡಿಸಿ ಇಂದು ಬಸವಕಲ್ಯಾಣ ನಗರದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದರು.
ನಗರದ ಐತಿಹಾಸಿಕ ಕೋಟೆ ಇಂದ ಮುಖ್ಯ ರಸ್ತೆಯ ಮಾರ್ಗವಾಗಿ ಗಾಂಧಿ ವೃತ್ತ ಹಾಗೂ ಬಸವೇಶ್ವರ ವೃತ್ತದ ಮೂಲಕ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಶ್ರೀ ವಿಜಯ್ ಸಿಂಗ್ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ ನಾರಾಯಣರಾವ್ ಅವರು ಮಾತನಾಡಿ ಅಮಿತ್ ಶಾ ಅವರು ಈ ಕೂಡಲೇ ರಾಜಿನಾಮೆ ಕೊಡಬೇಕು ಎಂದು ಒತ್ತಾಯಿಸಿದರು ಒಂದು ವೇಳೆ ರಾಜಿನಾಮೆ ಕೊಡದಿದ್ದರೆ ನಮ್ಮ ಪ್ರತಿಭಟನೆ ಹೀಗೆ ಮುಂದುವರೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಸಂದೀಪ್ ಕುಮಾರ್
