ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಇಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಪ್ರತಿಭಟನೆ ನಡೆಸಿದರು.
ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾದ ಮಾತುಗಳನ್ನಾಡಿದ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು ಹಾಗೂ ರಾಜ್ಯಸಭೆಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಹೆಸರನ್ನು ನೂರು ಬಾರಿ ಹೇಳುವ ಬದಲು ದೇವರ ಹೆಸರನ್ನು ಒಂದು ಬಾರಿ ಹೇಳಿದರೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಕೂಡಲೇ ರಾಷ್ಟ್ರಪತಿಯವರು ಹಾಗೂ ಈ ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಧ್ಯ ಪ್ರವೇಶ ಮಾಡಿ ಅಮಿತ್ ಶಾ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿ, ದೇಶದಿಂದ ಗಡಿ ಪಾರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿಯವರು ಕೊಟ್ಟೂರು ತಾಲೂಕಿನ ಉಪ ತಹಶೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವ ಬಳಗ, ದಲಿತ ಸಂಘರ್ಷ ಸಮಿತಿಯ ಹಾಗೂ ರೈತಾಪಿ ಸಂಘ, ಮಹಿಳಾ ಸಂಘ ಮತ್ತು ಮುಸ್ಲಿಂ ಲೀಗ್ ಇನ್ನೂ ಮುಂತಾದ ಸಂಘಟನೆಕಾರರು ಹಾಗೂ ಹಲವಾರು ಸಂಘ ಸಂಸ್ಥೆಗಳ ಉಪಸ್ಥಿತರಿದ್ದರು.
ವರದಿ ಗುರುರಾಜ್ ಎಲ್. ಕಲ್ಲಹಳ್ಳಿ ಟಿ
