ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವಂತಹ ಕಾನಮಡಗು ಗ್ರಾಮದಲ್ಲಿ (ಎಸ್ ಸಿ ಕಾಲೋನಿ ) ನೀರಿಗಾಗಿ ತುಂಬಾ ಸಂಕಷ್ಟವನ್ನು ಎದುರಿಸುವಂತಹ ಪರಿಸ್ಥಿತಿ ಗ್ರಾಮದಲ್ಲಿ ಸೃಷ್ಟಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ನೀರು ಅತ್ಯಮೂಲ್ಯವಾದಂತ ಸಂಪನ್ಮೂಲಗಳಲ್ಲಿ ಒಂದಾಗಿದೆ ಹಾಗೂ ಭೂಮಿ ಮೇಲಿರುವ ಎಲ್ಲಾ ಜೀವಿಗಳಿಗೂ ನೀರು ಮೂಲಭೂತ ಅವಶ್ಯಕತೆವಾಗಿದೆ.
ಇಂತಹ ಸಂದರ್ಭದಲ್ಲಿ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವಂತಹ ಕಾನಮಡುಗು ಗ್ರಾಮದಲ್ಲಿ ಸುಮಾರು ಮೂರು ತಿಂಗಳಿಂದ ನೀರಿಗೆ ತುಂಬಾ ವ್ಯಥೆ ಪಡುತ್ತಿದ್ದಾರೆ ಕಾನಮಡುಗು ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ಗ್ರಾಮದ ನಾಲ್ಕನೇ ವಾರ್ಡಿನಲ್ಲಿ ಕಂಡು ಬರುತ್ತದೆ ಅಲ್ಲಿನ ಮಹಿಳೆಯರು ನೀರಿಗಾಗಿ ತುಂಬಾ ಸಂಕಷ್ಟವನ್ನು ಎದುರಿಸುವಂತ ಪರಿಸ್ಥಿತಿ ಬಂದಿದೆ. ಆಲೂರು ಗ್ರಾಮ ಪಂಚಾಯಿತಿಗೆ ಮಾಹಿತಿಯು ಗೊತ್ತಿದ್ದರೂ ಹಾಗೂ ಅಲ್ಲಿನ ಗ್ರಾಮ ಪಂಚಾಯತಿಯ ಸದಸ್ಯರು ಅಧ್ಯಕ್ಷರಾಗಲಿ ಅದರ ಬಗ್ಗೆ ಗಮನ ಹರಿಸದೆ ಇರುವುದರಿಂದ ಜನಗಳಿಗೆ ಸಂಕಷ್ಟ ಎದುರಿಸುವಂತಹ ಪರಿಸ್ಥಿತಿ ಎದುರಾಗಿದೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ವರದಿ : ಗುರುರಾಜ್ ಎಲ್, ಕಲ್ಲಹಳ್ಳಿ ಟಿ
