ವಿಜಯನಗರ/ ಕೂಡ್ಲಿಗಿ : ಕಲ್ಲಹಳ್ಳಿ ಹಾಗೂ ತೊರೆಕೋಲಮ್ಮನಹಳ್ಳಿ ನಡುವೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಹೋಗಬೇಕಾಗಿರುವ ಖಾಸಗಿ ಬಸ್ ಇಂದು ತೊರೆಕೋಲಮ್ಮನಹಳ್ಳಿ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಯಾವುದೇ ಪ್ರಾಣ ಅಪಾಯವಿಲ್ಲದೆ ಪಾರಾಗಿದ್ದಾರೆ.
ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬಸ್ಸಿನ ಮುಂಭಾಗ ಪೂರ್ತಿಯಾಗಿ ಹೊಡೆದು ಹೋಗಿದ್ದು, ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿರುವಂತಹ ಸಾರ್ವಜನಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಹಾಗೂ ಕಮಂಡಲಗೊಂದಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಹ ಆ ಕಾಲೇಜು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿ ಅವರು ನಾಯಕನಹಟ್ಟಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಹಾಗೂ ಯಾವುದೇ ದೊಡ್ಡ ಪರಿಣಾಮಗಳು ಬೀರದೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ- ಗುರುರಾಜ್ ಎಲ್, ಕಲ್ಲಹಳ್ಳಿ ಟಿ
